ಮೈಸೂರು: ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ ಎಂಬುದು ಮೂಲಗಳ ಪ್ರಕಾರ ಇಂದು (ಶನಿವಾರ ಅಕ್ಟೋಬರ್ 26)ರಂದು ತಿಳಿದು ಬಂದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚುರುಕಿನ ತನಿಖೆಯನ್ನು ಕೈಗೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಲೋಕಾಯುಕ್ತ ನೋಟಿಸು ಜಾರಿ ಮಾಡಿದೆ.
ಹೌದು, ಮುಡಾ ಸಂಕಷ್ಟದಲ್ಲಿ ಸೆಲುಕಿರುವ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ಲೋಕಾಯುಕ್ತರು ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಇನ್ನು ಪ್ರಕರಣದ 2ನೇ ಆರೋಪಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೇಳಿಕೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ನಂತರ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.
3ನೇ ಆರೋಪಿ ಸಿದ್ದರಾಮಯ್ಯನವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ಜೆ.ದೇವರಾಜು ಅವರನ್ನು ಲೋಕಾಯುಕ್ತ ವಿಚಾರಣೆಗೊಳಪಡಿಸಿದೆ. ದೀಪಾವಳಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಮುಡಾ ಪ್ರಕಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 25-2024 ಒಳಗಾಗಿ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ. ಹಾಗಾಗಿ ಇದೀಗ ಮುಡಾ ಪ್ರಕಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆಯನ್ನು ಚುರುಕುಗೊಳಿಸುವ ಸಾಧ್ಯತೆ ಇದೆ ಎಂಬುದು ತಿಳಿದು ಬಂದಿದೆ.