ಎಂ.ಪಿ. ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ

ಎಂ.ಪಿ. ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ

ಮೈಸೂರು, ಅ.25 : ರಾಜ್ಯದ ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರಿಗೆ ಕೊಲೆ ಬೆದರಿಕೆ ಎದುರಾಗಿದೆ. ಬೆದರಿಕೆ ಒಡ್ಡಿದವರು ಬೇರಾರೂ ಅಲ್ಲ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಆಪ್ತವಲಯದಲ್ಲಿದ್ದ ಹುಣಸೂರು ಕ್ಷೇತ್ರದ ಉಪಚುನಾವಣೆಯ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಎಚ್.ಪಿ.ಮಂಜುನಾಥ್. ಅವರ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಎಂ.ಪಿ.ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಈ ಸಂಬಂಧ ಮೈಸೂರಿನ ವಿ.ವಿ.ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುಮಾ ದೂರಿನಲ್ಲೇನಿದೆ..? :

ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ.ರವೀಂದ್ರ ಹಾಗೂ ಎಚ್.ಪಿ.ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ ಖರೀದಿಸಿದ್ದ. ಸ್ನೇಹಿತರಾಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಮಂಜುನಾಥ್ಗೆ ಬಿಟ್ಟುಕೊಟ್ಟಿದ್ದ. ಆತನ ಮರಣಾನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದು, ಈಗ ಮನೆ ಖಾಲಿ ಮಾಡುತ್ತಿಲ್ಲ. ಮನೆ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಹೊರಿಸಿ ಸುಮಾ ವಿಜಯ್ ಪೊಲೀಸರಿಗೆ ವಿಸ್ತೃತ ದೂರು ಸಲ್ಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos