ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ, ಡಿ. 28: ಶಂಕಿತ ನ್ಯುಮೋನಿಯಾದಿಂದಾಗಿ ಕಳೆದ ವಾರದಿಂದ ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೆಜಾವರ ಶ್ರೀಗಳ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಶ್ರೀಗಳಿಗೆ ಪ್ರಜ್ಞಾ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿಲ್ಲ, ಜೀವರಕ್ಷಕ ಸಾಧನಗಳ ಸಹಾಯದಲ್ಲಿದ್ದು, ದೇಹಸ್ಥಿತಿ ಕ್ಷೀಣಿಸುತ್ತಿದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಭೇಟಿ ಮಾಡಲು ಗಣ್ಯರು ಆಗಮಿಸುತ್ತಿದ್ದಾರೆ. ಆದರೆ ಶನಿವಾರದಿಂದ ಶ್ರೀಗಳ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರಿಬ್ಬರು ಶ್ರೀಗಳ ಚಿಕಿತ್ಸೆಗೆ ಸಲಹೆ ನೀಡುತ್ತಿದ್ದಾರೆ. ಮಣಿಪಾಲದ ತಜ್ಞ ವೈದ್ಯರ ತಂಡವು ದಿಲ್ಲಿಯ ಏಮ್ಸ್‌ ತಜ್ಞರ ಸಂಪರ್ಕದಲ್ಲಿದ್ದರೂ ಶುಕ್ರವಾರದಿಂದ ದೇಹ ಚೇತರಿಕೆ ಹಾಗೂ ಚಿಕಿತ್ಸೆಗೆ ಸ್ಪಂದನ ನಿಧಾನವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

 

ಫ್ರೆಶ್ ನ್ಯೂಸ್

Latest Posts

Featured Videos