ಕಾಂಗ್ರೆಸ್ ಅಭ್ಯರ್ಥಿಗೆ ಮುಕೇಶ್ ಅಂಬಾನಿ ಬೆಂಬಲ

ಕಾಂಗ್ರೆಸ್ ಅಭ್ಯರ್ಥಿಗೆ ಮುಕೇಶ್ ಅಂಬಾನಿ ಬೆಂಬಲ

ಮುಂಬೈ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಭಾರತದ ಅತಿ ಸಿರಿವಂತ ವ್ಯಕ್ತಿ ಮುಕೇಶ್ ಅಂಬಾನಿ ಬಹಿರಂಗವಾಗಿಯೇ ಕಾಂಗ್ರೆಸ್ ಅಭ್ಯರ್ಥಿಯೊಬ್ಬರನ್ನು ಬೆಂಬಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹೌದು, ದಕ್ಷಿಣ ಮುಂಬೈ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವೊರಾಗೆ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಮ್ಮ ಬೆಂಬಲ ಘೋಷಿಸಿದ್ದು, ಇವರು ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಕಳೆದ 10 ವರ್ಷಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಿಲಿಂದ್ ದೇವೊರಾ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ವಿಷಯಗಳ ಕುರಿತು ಆಳವಾದ ಜ್ಞಾನವನ್ನು ಹೊಂದಿದ್ದಾರೆ. ಇಂಥವರ ಆಯ್ಕೆಯಿಂದ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಮುಕೇಶ್ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos