ಹೈದರಾಬಾದ್‌ ಹಾಗೂ ಮುಂಬೈ ರೋಚಕ ಪಂದ್ಯದಲ್ಲಿ ಮುಂಬೈಗೆ ಸೋಲು

ಹೈದರಾಬಾದ್‌ ಹಾಗೂ ಮುಂಬೈ ರೋಚಕ ಪಂದ್ಯದಲ್ಲಿ ಮುಂಬೈಗೆ ಸೋಲು

ಬೆಂಗಳೂರು: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್‌ ತಂಡ ಮುಖಾಮುಖಿಯಾಗಿತ್ತು.

ಇಲ್ಲಿನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 31 ರನ್ಗಳ ಇತಿಹಾಸದ ಗೆಲುವು ದಾಖಲಿಸಿದೆ. ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ರನ್ ಬಾರಿಸಿದ ಸನ್ ರೈಸಸ್ ಹೈದ್ರಾಬಾದ್ ತಂಡವು ಮುಂಬೈಗೆ 278ಗಳ ಬೃಹತ್ ಗುರಿ ನೀಡಿದ್ದು ಈ ಕಠಿಣ ಗುರಿ ಬೆನ್ನಟ್ಟಿದ ಮುಂಬೈ ತಂಡ ಕೊನೆಯ ಹಂತದವರೆಗೂ ಪೈಪೋಟಿ ನೀಡಿ ಸೋಲನ್ನು ಅನುಭವಿಸಿತು.

ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್‌ ತಂಡವನ್ನು 31 ರನ್​ಗಳಿಂದ ಮಣಿಸುವ ಮೂಲಕ ಲೀಗ್​ನಲ್ಲಿ ಮೊದಲ ಗೆಲುವು ದಾಖಲಿಸಿದೆ. ಇತ್ತ ಹೈದರಾಬಾದ್‌ ವಿರುದ್ಧ ಗೆಲುವಿಗಾಗಿ ಹೋರಾಡಿ ವಿರೋಚಿತ ಸೋಲು ಕಂಡ ಮುಂಬೈ ಇಂಡಿಯನ್ಸ್‌ ಲೀಗ್​ನಲ್ಲಿ ಸತತ ಎರಡನೇ ಸೋಲು ದಾಖಲಿಸಿದೆ.

ಮೊದಲಿಗೆ ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 3 ವಿಕೆಟ್‌ ಕಳೆದುಕೊಂಡು 277 ರನ್ ಗಳಿಸಿ ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿತು. ಇತ್ತ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 5 ವಿಕೆಟ್‌ ಕಳೆದುಕೊಂಡು 246 ರನ್ ಗಳಿಸಿ ಸೋಲನುಭವಿಸಿತು.

ಹೈದರಾಬಾದ್‌ ನೀಡಿದ 277 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈಗೆ ಬಿರುಸಿನ ಆರಂಭ ಸಿಕ್ಕಿತು. ರೋಹಿತ್ ಹಾಗೂ ಕಿಶನ್​ ಬೌಂಡರಿಗಳ ಮಳೆಗರೆದು ತಂಡಕ್ಕೆ ನಿರೀಕ್ಷಿತ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ವಿಕೆಟ್​ಗೆ ಕೇವಲ 3.2 ಓವರ್​ಗಳಲ್ಲಿ 56 ರನ್​ಗಳ ಜೊತೆಯಾಟ ನೀಡಿದರು. ಆದರೆ ನಾಲ್ಕನೇ ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಇಶಾನ್ ಮುಂದಿನ ಎಸೆತದಲ್ಲಿ ಔಟಾದರು. ಕಿಶನ್ ತಮ್ಮ ಇನ್ನಿಂಗ್ಸ್​ನಲ್ಲಿ 13 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 34 ರನ್ ಗಳಿಸಿದರು. ಮುಂದಿನ ಓವರ್‌ನಲ್ಲಿ ರೋಹಿತ್ ಕೂಡ 12 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 1 ಬೌಂಡರಿ ನೆರವಿನಿಂದ 26 ರನ್ ಗಳಿಸಿ ಔಟಾದರು.

ನಂತರ ಇನ್ನಿಂಗ್ಸ್ ಜವಬ್ದಾರಿ ಹೊತ್ತ ನಮನ್ ಧೀರ್ ಮತ್ತು ತಿಲಕ್ ವರ್ಮಾ ಬಿರುಸಿನ ಬ್ಯಾಟಿಂಗ್ ಮಾಡಿ ಕೇವಲ 10 ಓವರ್​ಗಳಲ್ಲಿ ತಂಡದ ಮೊತ್ತವನ್ನು 141 ರನ್​ಗಳ ಗಡಿ ದಾಟಿಸಿದರು. ಇದೇ ವೇಳೆ 30 ರನ್ ಗಳಿಸಿದ್ದ ನಮನ್ ಧೀರ್ ಅವರನ್ನು ಜಯದೇವ್ ಬಲಿ ಪಡೆದರು. ನಂತರ ಮೈದಾನಕ್ಕೆ ಬಂದ ಹಾರ್ದಿಕ್ ಪಾಂಡ್ಯ ಕೂಡ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಈ ಹಂತದಲ್ಲಿ ತಿಲಕ್ ವರ್ಮಾ 24 ಎಸೆತಗಳಲ್ಲಿ ತಮ್ಮ ಅರ್ಧ ಶತಕವನ್ನು ಪೂರ್ಣಗೊಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos