ಕೋಲಾರ, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: ನಾನು ಗೆದ್ದರೂ, ಸೋತರೂ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗಲ್ಲ ಎಂದು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯಿಂದ ಈ ಬಾರಿ ಕಾಂಗ್ರೆಸ್ ಪಕ್ಷ ಸೋಲನುಭವಿಸಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶದೊಂದಿಗೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿದ ಅವರು, ಸಮ್ಮಿಶ್ರ ಸಕಾರದಿಂದ ರಾಜ್ಯದಲ್ಲಿ ಸೂಕ್ತ ಫಲಿತಾಂಶ ಸಿಗಲಿಲ್ಲ. ಮುಂದಿನ ಚುನಾವಣೆಯಲ್ಲಿ ಲೋಕಸಭೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸುತ್ತೇನೆ. ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ನಿಲುವು ಸ್ಪಷ್ಟಪಡಿಸಿದರು.