ಬೆಂಗಳೂ: ಬಿಎಚ್ಇಎಲ್ ಮಹಿಳಾ ಉದ್ಯೋಗಿಯ ಬರ್ಬರ ಕೊಲೆ

ಬೆಂಗಳೂ: ಬಿಎಚ್ಇಎಲ್ ಮಹಿಳಾ ಉದ್ಯೋಗಿಯ ಬರ್ಬರ ಕೊಲೆ

ಬೆಂಗಳೂರು: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬಿಎಚ್‍ಇಎಲ್ ಮಹಿಳಾ ಉದ್ಯೋಗಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸನ್‍ಸಿಟಿ ನಿವಾಸಿ ಅನು (32) ಕೊಲೆಯಾದ ಉದ್ಯೋಗಿ. ಸನ್‍ಸಿಟಿಯಲ್ಲಿ ಒಟ್ಟು 6 ಮನೆಯಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಅನು ವಾಸವಿದ್ದರೆ, 3ನೇ ಮಹಡಿಯಲ್ಲಿ ಇವರ ಅಕ್ಕ ವಾಸವಾಗಿದ್ದಾರೆ.
ರಾತ್ರಿ 8 ಗಂಟೆ ಸಮಯದಲ್ಲಿ ಅನು ಅವರು ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭದಲ್ಲಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅನು ಅವರ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿವೇಶನ ವಿವಾದ ವಿಚಾರದಲ್ಲಿ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕೊಲೆ ಆರೋಪಿಗಳಿಗಾಗಿ ತನಿಖೆ ಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos