ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ

ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಯಾರೋ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರಲ್ಲಿ ಮೂವರು ಕೊಪ್ಪಳ ಮೂಲದವರಾಗಿದ್ದಾರೆ.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಲಾಗುತ್ತಿತ್ತು. ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಕಣ್ಣೀರು ಹಾಕುತ್ತಿದ್ದಾರೆ.

ಕೊಲೆಯಾದ ಸ್ಥಳಕ್ಕೆ ಸಚಿವ ಹೆಚ್​ ಕೆ ಪಾಟೀಲ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಕಾಶ್ ಬಾಕಳೆ ಕುಟುಂಬಕ್ಕೆ ಧೈರ್ಯ ಹೇಳಿದ ಸಚಿವರು, ಇದೊಂದು ದುರ್ದೈವದ ಸಂಗತಿ, ಅಮಾನುಷ ಘಟನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಗಡುಕರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಡರಾತ್ರಿ ಪ್ರಕಾಶ ಬಾಕಳೆ ಮನೆಯಲ್ಲಿ ನಾಲ್ವರ ಕೊಲೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದೇವೆ. ಕಾರ್ತಿಕ್ ಬಾಕಳೆ, ಪರಶುರಾಮ ಹಾದಿಮನಿ, ಪತ್ನಿ ಲಕ್ಷ್ಮೀ ಹಾದಿಮನಿ, ಪುತ್ರಿ ಆಕಾಂಕ್ಷಾ ಹಾದಿಮನಿ ಕೊಲೆಗೀಡಾದವರು ಎಂಬ ಮಾಹಿತಿ ಇದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ. ಕೊಲೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಕೊಲೆಗೈದ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು. ಬೆಳಗಿನ ಜಾವ 2 ರಿಂದ 3 ಗಂಟೆ ಒಳಗೆ ಈ ಘಟನೆ ನಡೆದಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos