‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಸಿದ್ದರಾಮಯ್ಯ

‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಸಿದ್ದರಾಮಯ್ಯ

ಬೆಂಗಳೂರು, ಮೇ.6, ನ್ಯೂಸ್ ಎಕ್ಸ್ ಪ್ರೆಸ್: ಈ ಬಗ್ಗೆ ಟ್ವೀಟ್​ ಮಾಡುವ ಮೂಲಕ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಮೋದಿ ಆಡಳಿತ ಅಂತ್ಯವಾಗುತ್ತಿದ್ದು, ವಿನಾಶಕಾಲದಲ್ಲಿ ವಿಪರೀತ ಬುದ್ಧಿ ತೋರಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂ.1 ಎಂಬ ಹಣೆಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎನ್ನುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್​ ಸೇರಿದಂತೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಮಯ್ಯ ಕೂಡ ಅಪಸ್ವರ ಎತ್ತಿದ್ದು, ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕುಹಕವಾಡಿದ್ದಾರೆ. 5ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಶನಿವಾರ ಉತ್ತರಪ್ರದೇಶದ ಲಖನೌನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮೋದಿ ಮಾತನಾಡಿದ್ದರು. “ರಾಹುಲ್ ಗಾಂಧಿ ಅವರೇ ನಿಮ್ಮ ತಂದೆ ರಾಜೀವ್ ಗಾಂಧಿ 1980ರಲ್ಲಿ ಪ್ರಧಾನಿಯಾಗಿದ್ದ ಕಾಲದಲ್ಲಿ ಬೊಫೋರ್ಸ್ ಹಗರಣ ನಡೆದಿತ್ತು. ಸೈನ್ಯಕ್ಕೆ ರಕ್ಷಣಾ ಸಾಮಗ್ರಿಗಳನ್ನು ಪೂರೈಸುವ ಸ್ವೀಡಿಶ್ ಮೂಲದ ಬೊಪೋರ್ಸ್ ಕಂಪೆನಿಯಿಂದ ರಾಜೀವ್ ಗಾಂಧಿ ದೊಡ್ಡ ಮೊತ್ತದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದರು. ಈ ಮೂಲಕ ಭ್ರಷ್ಟಾಚಾರಿ ನಂ.1 ಎಂಬ ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು,” ಎಂದು ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಟ್ವೀಟ್​ ಮಾಡುವ ಮೂಲಕ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಮೋದಿ ಆಡಳಿತ ಅಂತ್ಯವಾಗುತ್ತಿದ್ದು, ವಿನಾಶಕಾಲದಲ್ಲಿ ವಿಪರೀತ ಬುದ್ಧಿ ಎಂಬಂತೆ ಮಾತನಾಡುತ್ತಿದ್ದಾರೆ ಎಂದು ತಮ್ಮ ಟ್ವಿಟ್ಟರ್​ ವಾಲ್​ನಲ್ಲಿ ಬರೆದುಕೊಂಡಿದ್ದಾರೆ. “ವಿನಾಶಕಾಲೇ ವಿಪರೀತ ಬುದ್ಧಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ,” ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಈ ಬಾರಿ ಮೋದಿ ಮತ್ತೆ ಪ್ರಧಾನಿ ಆಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ.  ಮೋದಿಯಿಂದ ಹಿಡಿದು ಈಶ್ವರಪ್ಪವರೆಗೆ ಎಲ್ಲರೂ ಹತಾಶೆಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ ಬಂದಿದೆ. ಸೋಲಿನ ಭೀತಿಯಲ್ಲಿರುವ ಮೋದಿಯಿಂದ ಈಶ್ವರಪ್ಪನವರವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ‌ ಘೋಷಿಸಿಕೊಳ್ಳುವುದು ಒಳ್ಳೆಯದು,” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸೋಲಿನ ಭೀತಿಯಲ್ಲಿರುವ  ನರೇಂದ್ರಮೋದಿಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ‌ ಘೋಷಿಸಿಕೊಳ್ಳುವುದು ಒಳ್ಳೆಯದು. ಮೋದಿ ಅವರ ಹೇಳಿಕೆಗೆ ರಾಹುಲ್​ ಕೂಡ ಕಿಡಿಕಾರಿದ್ದರು. “ಪ್ರಧಾನಿ ಮೋದಿಯವರೆ ನಿಮ್ಮ ಬಗೆಗಿನ ಆಂತರಿಕ ನಂಬಿಕೆಗಳನ್ನು ನನ್ನ ತಂದೆಯ ಮೇಲೆ ಆರೋಪಿಸಿ ನೀವು ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಿಮ್ಮ ಕರ್ಮವು ನಿಮಗಾಗಿ ಕಾದಿಗೆ. ನಮ್ಮೆಲ್ಲ ಪ್ರೀತಿ ಹಾರೈಕೆ ನಿಮ್ಮ ಮೇಲಿದೆ,” ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಹೇಳಿಕೆಯನ್ನು ಖಂಡಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos