ಮೈಸೂರಿನಲ್ಲಿ ರಂಗೇರಿದ ಚುಣಾವಣೆ

ಮೈಸೂರಿನಲ್ಲಿ ರಂಗೇರಿದ ಚುಣಾವಣೆ

ಮೈಸೂರು: ಸಿಎಂ ಸಿದ್ದರಾಮಯ್ಯ ಮೂರು ದಿನದ ರೆಸಾರ್ಟ್ ವಾಸ್ತವ್ಯ ಮುಗಿಸಿ ಮೈಸೂರಿಗೆ ಎಂಟ್ರಿ ಕೊಟ್ಟಿದ್ದು, ಇಂದು ಬೆಳಗ್ಗೆ  ಕೃಷ್ಣರಾಜ ಕ್ಷೇತ್ರದ ಭೂತಾಳೆ ಪಿಚ್‌ನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ, ಜೆಡಿಎಸ್ ತೊರೆದು ಎಚ್.ವಿ.ರಾಜೀವ್, ಸದಾನಂದ, ಬಿ.ಎಲ್.ಭೈರಪ್ಪ, ಕೆ.ವಿ.ಮಲ್ಲೇಶ್, ಓಂಪ್ರಕಾಶ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಲೋಕಸಭೆ ಚುನಾವಣೆಯ ಕಣ ರಂಗೇರಿದ್ದು ಸಾಂಸ್ಕೃತಿ ಕನಗರಿ ಮೈಸೂರಿಗೆ  ಇಂದು ರಾಜಕೀಯ ನಾಯಕರ ದಂಡೇ ಆಗಮಿಸುತ್ತಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿಯ ಸಾಲು ಸಾಲು ಪ್ರಮುಖ ನಾಯಕರು ಭೇಟಿ ನೀಡುತ್ತಿದ್ದಾರೆ.

ನಂತರ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ಕಲಾ ಮಂದಿರದಲ್ಲಿ ನಾ ಕಂಡ ಸಿದ್ದರಾಮಯ್ಯ ಪುಸ್ತಕ ಬಿಡುಗಡೆಯಾಗಲಿದೆ.

ಮತ್ತೊಂದೆಡೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ನಾಯಕರೂ ಸಹ ಮೈಸೂರಿನಲ್ಲಿ ಸಮಾಗಮವಾಗುತ್ತಿದ್ದು, ಇಂದು ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದಾರೆ. ಸಂಜೆ 4 ಗಂಟೆಗೆ ಖಾಸಗಿ ಹೋಟೆಲ್‌‌ನಲ್ಲಿ ಮಾಜಿ ಸಿಎಂ ಎಚ್.ಡಿ‌.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಮೈತ್ರಿ ನಾಯಕರ ಸಭೆ ನಡೆಯಲಿದ್ದು,  ಸಂಜೆ 5ಕ್ಕೆ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜನೆ ಮಾಡಲಾಗಿದೆ.   ಉಭಯ ಪಕ್ಷಗಳ ನಾಯಕರು, ಅಭ್ಯರ್ಥಿಗಳಾದ ಯದುವೀರ್, ಬಾಲರಾಜ್ ಸೇರಿದಂತೆ ಪ್ರಮುಖರು ಸಾಥ್ ನೀಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos