ಬೆಂಗಳೂರು, ಮೇ. 20, ನ್ಯೂಸ್ ಎಕ್ಸ್ ಪ್ರೆಸ್: ಡಿಸಿಎಂ ಜಿ.ಪರಮೇಶ್ವರ್ ಅವರು, ಮತದಾನೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ 20 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದಂತೆ ಇದೆ. ದೇಶದಲ್ಲಿ ವಸ್ತು ಸ್ಥಿತಿಯೇ ಬೇರೆ ಇದೆ. 300 ಸ್ಥಾನ ಬರುತ್ತೆಂದು ಬಿಜೆಪಿ ಸಮಾಧಾನ ಪಟ್ಟುಕೊಳ್ಳುತ್ತಿದ್ದು, ಫಲಿತಾಂಶ ಬಂದ ಬಳಿಕ ಚಿತ್ರಣ ತಿಳಿಯಲಿದೆ ಎಂದರು.