ಎನ್ ಡಿಎ ಪಕ್ಷ ದೂರವಿಡಲೂ ʼನಾಯ್ಡುʼ ಪ್ಲ್ಯಾನ್!

ಎನ್ ಡಿಎ ಪಕ್ಷ ದೂರವಿಡಲೂ ʼನಾಯ್ಡುʼ ಪ್ಲ್ಯಾನ್!

ಬೆಂಗಳೂರು, ಮೇ 22,ನ್ಯೂಸ್ ಎಕ್ಸ್ ಪ್ರೆಸ್ : ಲೋಕಸಭೆ ಚುನಾವಣೆ ನಂತರ ಎಲ್ಲಾ ಸಮೀಕ್ಷೆಗಳು ಎನ್ಡಿಎ ಪರವಾಗಿದ್ದು, ಬಿಎಸ್ಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಲಿವೆ ಎನ್ನಲಾಗಿತ್ತು. ಅಲ್ಲದೆ ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಸಕ್ರೀಯರಾಗಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಶಪಥ ತೊಟ್ಟಂತೆ ವಿವಿಧ ತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪದ್ಮನಾಭನಗರದಲ್ಲಿನ ನಿವಾಸಕ್ಕೆ ಭೇಟಿ ಮಾಡಿ ರಾಷ್ಟ್ರ ರಾಜಕಾರಣ ಕುರಿತು ಸಮಾಲೋಚನೆ ನಡೆಸಿದರು. ಎನ್ಡಿಎಯೇತರ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಹೆಣೆಯಬಹುದಾದ ರಾಜಕೀಯ ರಣತಂತ್ರಗಳ ಬಗ್ಗೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಈ ವೇಳೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos