ನಾನು ಮತ್ತೆ ಸಿಎಂ ಆಗಬಾರದಾ? : ಸಿದ್ದರಾಮಯ್ಯ ಪ್ರಶ್ನೆ

ನಾನು ಮತ್ತೆ ಸಿಎಂ ಆಗಬಾರದಾ? : ಸಿದ್ದರಾಮಯ್ಯ ಪ್ರಶ್ನೆ

ಹುಬ್ಬಳ್ಳಿ, ಮೇ. 14, ನ್ಯೂಸ್ ಎಕ್ಸ್  ಪ್ರೆಸ್: ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು, ನಾನು ಮತ್ತೆ ಸಿಎಂ ಆಗಬಾರದಾ ? ಜನರು ಬಯಸಿದರೆ ಮುಖ್ಯಮಂತ್ರಿ ಆಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ. ಜನರು ಆಶೀರ್ವಾದ ಮಾಡಿದರೆ ಮತ್ತೆ ನಾನು ಸಿಎಂ ಆಗಬಾರದಾ ? ಜನರ ಬಾಯಿ ಮುಚ್ಚಿಸಲು ಆಗುತ್ತಾ.ಎಂದು ಪ್ರಶ್ನಿಸಿದ್ದಾರೆ.

ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಗಲು ಕನಸು ಕಾಣುತ್ತಿದ್ದಾರೆ. ಅವರು ಹೇಳಿದ್ದನ್ನೆ ಹತ್ತು ಸಲ ಹೇಳುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos