ಮಂಡ್ಯ,ನ,19: ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ನಾಗರಾಜು, ತನ್ನ ಮಗ ಅನಿಲ್ ಪತ್ನಿ ವೀಣಾ ರನ್ನು ನವೆಂಬರ್ 9 ರಂದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ವಿಚಾರವಾಗಿ ನನ್ನ ಅಪ್ಪನೇ,ತನ್ನ ಹೆಂಡತಿಯನ್ನು ಅಕ್ರಮ ಸಂಬಂಧಕ್ಕೆ ಒಪ್ಪದ ಕಾರಣದಿಂದ ಕೊಲೆ ಮಾಡಿದ್ದಾನೆ, ಎಂದು ವೀಣಾ ಪತಿ ಅನಿಲ್ ಆರೋಪ ಮಾಡಿದ್ದರು.
ಪೊಲೀಸರು ವಿಚಾರಣೆ ನಡೆಸಿದ ಬಳಿಕ, ಕೋರ್ಟ್ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಮಂಡ್ಯದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದ ನಾಗರಾಜು ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.