4 ಮಕ್ಕಳನ್ನು ಹೆತ್ತ ಮಹಾತಾಯಿ!

4 ಮಕ್ಕಳನ್ನು ಹೆತ್ತ ಮಹಾತಾಯಿ!

ವಿಜಯಪುರ, ಅ. 19 : ಮಹಿಳೆಯೊಬ್ಬರು ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಸಾಮಾನ್ಯವಾಗಿ ಒಂದು ಮಗುವಾದರೆ ಸಾಕು ಹೆಣ್ಣು ಮಕ್ಕಳು ಪಡುವ ನೋವು ಅಷ್ಟಿಷ್ಟಲ್ಲ.. ಅದರಲ್ಲೂ ಇತ್ತಿಚಿಗೆ ಒಂದೇ ಸಲ ಬರೋಬ್ಬರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನಡೆದಿದೆ.
ವಿಜಯಪುರ ನಗರದ ರಾಜ್ ರತನ್ ಕಾಲೋನಿ ನಿವಾಸಿ ದಾಲಿಬಾಯಿ. ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ವಿಷಯವೇನೆಂದರೆ ದಾಲಿಬಾಯಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಗರದ ಮುದನೂರು ಆಸ್ಪತ್ರೆಯಲ್ಲಿ ದಾಲಿಬಾಯಿ ಅವರ ಹೆರಿಗೆ ನಡೆದಿದ್ದು, ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಅಲ್ಲದೆ ತಾಯಿ ಹಾಗೂ ನಾಲ್ಕು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇತ್ತ ನಾಲ್ಕು ಮಕ್ಕಳು ಒಟ್ಟಿಗೆ ಹುಟ್ಟಿದ್ದ ಕಾರಣ ಕುಟುಂಬ ವರ್ಗದಲ್ಲಿ ಸಂತಸ ಮನೆ ಮಾಡಿದೆ.

ಫ್ರೆಶ್ ನ್ಯೂಸ್

Latest Posts

Featured Videos