MP ಟಿಕೆಟ್‌ ಕೈ ತಪ್ಪುವ ಸಾಧ್ಯತೆ: ನಳೀನ್‌ ಕುಮಾರ್‌ ಕಟೀಲ್‌ ಭಾವುಕ ಮಾತು

MP ಟಿಕೆಟ್‌ ಕೈ ತಪ್ಪುವ ಸಾಧ್ಯತೆ: ನಳೀನ್‌ ಕುಮಾರ್‌ ಕಟೀಲ್‌ ಭಾವುಕ ಮಾತು

ಮಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಹೆಚ್ಚಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರು ಸಹ ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ನಳಿನ್ ಕುಮಾರ್ ಕಟೀಲ್ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲ ಎನ್ನುವ ಚರ್ಚೆ ಮುನ್ನೆಲೆಯಲ್ಲಿದೆ.

ಈ ಬಗ್ಗೆ ಸ್ವತಃ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಭಾವುಕರಾಗಿ ಮಾತನಾಡಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿ ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು, ಚಲಾವಣೆ ಆಗ್ತಾ ಇರಬೇಕು ಎಂದಿದ್ದಾರೆ. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ.

ಪಾರ್ಟಿ ಗುಡಿಸು ಹೇಳಿದ್ರೆ ಗುಡಿಸುತ್ತೇವೆ. ಒರೆಸು ಅಂದ್ರೆ ಒರೆಸುತ್ತೇವೆ. ಪಾರ್ಟಿ ಹೇಳಿದ ಕೆಲಸ ಮಾಡುತ್ತೇವೆ. ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕು ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ನಾವು ಕಾರ್ಯವನ್ನು ನಂಬಿರುವಂತವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.

ಇಲ್ಲಿ ಯಾರನ್ನು ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಗ್ಲಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ ಎಂದು ಭಾವುಕರಾದರು.

ಫ್ರೆಶ್ ನ್ಯೂಸ್

Latest Posts

Featured Videos