ಬೆಳ್ತಂಗಡಿ, ಆ. 21 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಾದ್ಯಂತ.9916 ಕ್ಕೂ ಮಿಕ್ಕಿ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಭಿಯಾನ ಯಶಸ್ವಿಯಾಗಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಡಿನಾದ್ಯಂತ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನವನ್ನು 2017ರಿಂದ ಪ್ರಾರಂಭಿಸಿದ್ದರು. ಕಳೆದ ಮೂರು ವರ್ಷದಲ್ಲಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿರುತ್ತದೆ. ಪ್ರಸ್ತುತ ವರ್ಷ ದಿನಾಂಕ: ಆ. 8 ರಿಂದ ರಿಂದ 15.ವರೆಗೆ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ಕರ್ನಾಟಕ ರಾಜ್ಯದಾದ್ಯಂತ “ನಮ್ಮೂರು ನಮ್ಮ ಶ್ರದ್ಧಾಕೇಂದ್ರ” ಕಾರ್ಯಕ್ರಮದಡಿಯಲ್ಲಿ “ಸ್ವಚ್ಚತೆಯೆಡೆಗೆ ನಮ್ಮ ನಡಿಗೆ” ಎಂಬ ದಿಟ್ಟ ನಿಲುವಿನೊಂದಿಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಂಡು ನಮ್ಮ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಬೇಕೆಂಬ ಸಂದೇಶ ನೀಡಲಾಗಿದೆ.
ಈ ಸಂದೇಶಕ್ಕೆ ಸ್ಪಂದಿಸಿದ ಭಕ್ತಾಧಿಗಳು ರಾಜ್ಯಾದ್ಯಂತ ಮಂದಿರ, ಬಸದಿ, ಚರ್ಚ್ ಹಾಗೂ ಮಸೀದಿ ಒಳಗೊಂಡಂತೆ ಸುಮಾರು ಕ್ಕೂ 9916ಕ್ಕೂ ಮಿಕ್ಕಿದ ಶ್ರದ್ಧಾಕೇಂದ್ರಗಳ ಸ್ವಚ್ಚತಾ ಮಹಾ ಅಭಿಯಾನವನ್ನು ಕೈಗೊಂಡು ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಿದ್ಧಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್. ಹೆಚ್ ಮಂಜುನಾಥ್ ಹಾಗೂ ಸಮುದಾಯ ಹಾಗೂ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಎ. ಶ್ರೀಹರಿಯವರು ತಿಳಿಸಿದ್ದಾರೆ.