ನಮೋ ಪ್ಯಾಕೆಜ್ ಘೋಷಣೆ   

ನಮೋ ಪ್ಯಾಕೆಜ್ ಘೋಷಣೆ   

ನವದೆಹಲಿ,ಮೇ. 13 : ಕೋವಿಡ್ – 19  ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ  ಎಲ್ಲಾ  ವರ್ಗಗಳ  ಜನತೆಗೆ ನೆರವಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿ ರೂ. ಮೊತ್ತದ  ನಮ್ಮ ಜಿಡಿಪಿಯ ಶೇ.10ರಷ್ಟು, ಅಭೂತಪೂರ್ವ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರು ತಿಳಿಸಿದ್ದರು.

ಕೊರೋನಾ ವೈರಸ್ ತಡೆಗೆ ದೇಶಾದ್ಯಂತ 3ನೇ ಹಂತದ ಲಾಕ್ ಡೌನ್ ಚಾಲ್ತಿಯಲ್ಲಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದಕ್ಕೆ ರಾಜಕೀಯ ನಾಯಕರು ಪರ-ವಿರೋಧವಾಗಿ ಪ್ರತಿಕ್ರಿಯಿಸಿದ್ದಾರೆ.

ಆರ್ಥಿಕ ಪ್ಯಾಕೇಜ್ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಲಿದ್ದು ಈ ಪ್ಯಾಕೇಜ್ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಮುಖ್ಯ ಪಾತ್ರ ವಹಿಸಲಿದೆ. ವಿಶ್ವವೇ ಭಾರತದ ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಮೆಚ್ಚುಗೆ ಸೂಚಿಸಿದ್ದು ಇದರಲ್ಲಿ ಭಾರತ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಮೋ ವಿರುದ್ಧ ಕೈ ಟೀಕೆ : ಪ್ರಧಾನಿ ಮೋದಿ ಅವರ ಭಾಷಣವನ್ನು ಟೀಕಿಸಿರುವ ಪ್ರತಿಪಕ್ಷ ಕಾಂಗ್ರೆಸ್, ದೇಶ ಪ್ರಧಾನಿ ಮೋದಿ ಅವರ ಭಾಷಣದಿಂದ ನಿರಾಶವಾಗಿದೆ ಎಂದು ಹೇಳಿದೆ. ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ಮತ್ತು ಅವರಿಗೆ ಸೂಕ್ತ ಆರ್ಥಿಕ ನೆರವು ನೀಡುವ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಸೂಕ್ತ ಉಲ್ಲೇಖವಿರಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos