ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲಾರು ಹೆಚ್ಚಾಗಿ ಹೊರಗಡೆ ಸುತ್ತಾಡಲು ಇಷ್ಟ ಪಡುತ್ತಾರೆ. ಅದರಲ್ಲಿಯೂ ಯುವಕ ಯುವತಿಯರು ಹೆಚ್ಚಾಗಿ ನಂದಿ ಬೆಟ್ಟಕೆ ಹೊಗಲು ಇಷ್ಟ ಪಡುತ್ತಾರೆ. ಏಕೆಂದರೆ ಚಳಿಗಾಲದಲ್ಲಿ ನಂದಿ ಬೆಟ್ಟ ನೊಡಲು ಎಷ್ಟು ಸುಂದರವಾಗಿ ಕಾಣುತ್ತದೆ. ಜಗದ್ವಿಖ್ಯಾತ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮ ಕ್ಕೆ ಡಿಸೆಂಬರ್ 11 ರಿಂದ ವಿದ್ಯುತ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. 06531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, ಮತ್ತು 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ.
ನಂದಿ ನಿಲ್ದಾಣದಿಂದ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಭೋಗನಂದೀಶ್ವರ ದೇವಸ್ಥಾನಕ್ಕೆ ಸುಮಾರು 1.4 ಕಿ.ಮೀ ದೂರವಿದೆ. ಹೆಚ್ಚುವರಿ 15-18 ಕಿಮೀ. ಕ್ರಮಿಸಬೇಕಾಗುತ್ತದೆ. ನಂದಿ ರೈಲು ನಿಲ್ದಾಣದಿಂದ ಈ ಸ್ಥಳಗಳಿಗೆ ಬಹು-ಮಾದರಿ ಸಾರ್ವಜನಿಕ ಅಥವಾ ಸಾಮಾನ್ಯ ಸಾರಿಗೆ (ಬಸ್ಸುಗಳು, ಆಟೋಗಳು, ಇತ್ಯಾದಿ) ಕಡಿಮೆ ಇದ್ದು ಪ್ರವಾಸಿಗೆರಿಗೆ ಹೆಚ್ಚು ಅನುಕೂಲವಾಗುವುದಿಲ್ಲ ಎನ್ನಲಾಗಿದೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆ ಇಲಾಖೆ ಸಲಹೆ ನೀಡಿದ್ದಾರೆ.