ನಟರಾಕ್ಷಸನ ಬರ್ತಡೇ ಸೆಲೆಬ್ರೇಷನ್

ನಟರಾಕ್ಷಸನ ಬರ್ತಡೇ ಸೆಲೆಬ್ರೇಷನ್

ಕನ್ನಡ ಚಲನ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಇವರು ಬಹುಭಾಷೆಯಲ್ಲಿ ನಟಿಸಿಯೂ ಸಹ ಸೈ ಎನಿಸಿಕೊಂಡಿದ್ದಾರೆ. ದಕ್ಷಿಣ ಭಾರತದ್ಯಾಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಇವರ ಬರ್ತಡೇ ಸೆಲೆಬ್ರೇಟ್ಅನ್ನು ಅಭಿಮಾನಿಗಳು ಬಹಳ ಅದ್ದೂರಿಯಿಂದ ಸಂಭ್ರಮಾಚರಣೆ ಮಾಡುತ್ತಿದಾರೆ. ನೆನ್ನೆ ಮಧ್ಯರಾತ್ರಿಯಿಂದಲೇ ಸಂಭ್ರಮ ಆಚರಣೆ ಶುರುವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಈ ಸಡಗರದಲ್ಲಿ ಭಾಗಿ ಆಗಿದ್ದಾರೆ.
ಈ ವರ್ಷ ಧನಂಜಯ್ ಅವರಿಗೆ ಹುಟ್ಟುಹಬ್ಬ ವಿಶೇಷವಾಗಿದೆ. ಏಕೆಂದರೆ, ಕಳೆದ ಕೆಲವು ವರ್ಷಗಳಿಂದ ಅವರಿಗೆ ಜನ್ಮದಿನವನ್ನು ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಅಭಿಮಾನಿಗಳ ಜೊತೆ ಸೇರಿ ಅವರು ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮದಲ್ಲಿ ಭಾಗಿಯಾದ ಎಲ್ಲಾ ಅಭಿಮಾನಿಗಳಿಗೆ ವಿಶೇಷವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos