ಬೆತ್ತಲಾಗಿದ್ದ ನಟಿ ವಿರುದ್ಧ ದೂರು ದಾಖಲು

ಬೆತ್ತಲಾಗಿದ್ದ ನಟಿ ವಿರುದ್ಧ ದೂರು ದಾಖಲು

ಚೆನ್ನೈ ಜು. 19 :  ಚಿತ್ರದಲ್ಲಿ ಬೆತ್ತಲಾಗಿ ನಟಿಸಿದ್ದಕ್ಕೆ ಅಮಲಾ ಪೌಲ್ ವಿರುದ್ಧ ದೂರು ದಾಖಲಾಗಿದೆ. ಅದಾಯಿ ಚಿತ್ರದಲ್ಲಿ ಅಮಲಾ ಪೌಲ್ ನಗ್ನತೆ ಪ್ರಚಾರ ಮಾಡುತ್ತಿದ್ದಾರೆ ಹಾಗೂ ತಮಿಳಿನ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಅನೈತು ಮಕ್ಕಲ್ ಕಚ್ಚಿ ಸ್ಥಾಪಕಿ ರಾಜೇಶ್ವರಿ ಪ್ರಿಯಾ ಅವರು ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿ ಮಾಧ್ಯಮಗಳ ಜೊತೆ ಮಾತನಾಡಿದ ರಾಜೇಶ್ವರಿ ಪ್ರಿಯಾ ಅವರು, ನಾನು ಡಿಜಿಪಿ ಅವರನ್ನು ಭೇಟಿ ಮಾಡಿ ಚಿತ್ರದ ನಿರ್ಮಾಪಕರ ವಿರುದ್ಧ ಕ್ರಮಕೈಗೊಳ್ಳಿ ಎಂದು ಬೇಡಿಕೆ ಇಟ್ಟಿದ್ದೇನೆ. ಚಿತ್ರದ ಪ್ರಮೋಶನ್ಗಾಗಿ ನಗ್ನ ಪೋಸ್ಟರ್ ಗಳನ್ನು ಬಳಸಲಾಗುತ್ತಿದೆ. ಇದರಿಂದ ಮಕ್ಕಳು ಪ್ರಭಾವಿತರಾಗುತ್ತಾರೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos