ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

ದೊಡ್ಡಬಳ್ಳಾಪುರ, ನ. 07: ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರವಾಗಿದೆ.

ರಾಜ್ಯದಲ್ಲಿನ 6022 ಗ್ರಾಮ ಪಂಚಾಯತ್ ಗಳಲ್ಲಿ  ದೀನದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್ ಪುರಸ್ಕಾರ ಪಡೆದ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಬಾಶೆಟ್ಟಿಹಳ್ಳಿ ಪಂಚಾಯ್ತಿಗೆ ರಾಷ್ಟ್ರೀಯ ಪ್ರಶಸ್ತಿ ಒಲಿದಿದೆ.  47 ಜನ ಸದಸ್ಯರಿರುವ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿ ಆರೋಗ್ಯ, ನೈರ್ಮಲ್ಯ ಶಿಕ್ಷಣ ಕಸದ ನಿರ್ವಹಣೆ ಸೇರಿದಂತೆ ಪ್ರಮುಖ 8 ಮೂಲಭೂತ ವಿಷಯಗಳಲ್ಲಿ ರಾಜ್ಯದಲ್ಲೇ ಅತ್ಯುತ್ತಮ ಸಾಧನೆ ಮಾಡಿರುವುದರಿಂದ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ. ಅನ್ನೊದು ಪಂಚಾಯಿತಿ ಅಧ್ಯಕ್ಷೆ ನಾರಾಯಣಮ್ಮರ ಮಾತು.

ದೇಶದಲ್ಲಿಯೇ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರವನ್ನು ಪಡೆದ ಹೆಗ್ಗಳಿಕೆ ಬಾಶೆಟ್ಟಿಹಳ್ಳಿ ಪಂಚಾಯಿತಿಗೆ ಇದೆ. ಡಿಜಿಟಲ್ ಲೈಬ್ರರಿ. ಮತ್ತು ಕಸ ನಿರ್ವಹಣೆಯಲ್ಲಿ ಅದ್ಬುತ ಸಾಧನೆ ಮಾಡಿರುವುದು ಬಾಶೆಟ್ಟಿಹಳ್ಳಿ ಪಂಚಾಯಿತಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ರಾಷ್ಟ್ರೀಯ ಪುರಸ್ಕಾರ ನಮ್ಮ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ. ಮುಂದೆ ಮತ್ತಷ್ಟು ಆಭಿವೃದ್ಧಿ ಕೆಲಸ ಮಾಡುವುದಾಗಿ ಪಿಡಿಓ ಕುಮಾರ್ ತಿಳಿಸಿಸಿದರು.

ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ರಚನೆಯಾಗಿದ್ದು, ಸ್ಥಳೀಯ ಸರ್ಕಾರಗಳು ಅದರ ಅಶಯದಂತೆ ಬಾಶೆಟ್ಟಿಹಳ್ಳಿ ಪಂಚಾಯಿತಿ ಅಭಿವೃದ್ದಿ ಕಾರ್ಯಗಳನ್ನು ಮಾಡುವ ಮೂಲಕ ಜನರ ನಿರೀಕ್ಷೆ ಮೀರಿ ಕೆಲಸ ಮಾಡುತ್ತಿದೆ. ಅದರ ಪ್ರತಿಫಲ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿರೋದು ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos