ರಾಷ್ಟ್ರೀಯ ಐಕ್ಯತಾ ದಿನಾಚರಣೆ

ರಾಷ್ಟ್ರೀಯ ಐಕ್ಯತಾ ದಿನಾಚರಣೆ

ಕೋಲಾರ: ಚಿನ್ನದ ಗಣಿ ಪ್ರದೇಶದ ಚಾಂಪಿಯನ್ ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಜಿ.ಪಿ.ರಾಜು ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಿದರು. ನಮ್ಮಲ್ಲಿರುವ ಬೇದ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ಮಾಡಲಾಯಿತು.
ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ನ. ೧೯ ರಿಂದ ೨೫ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಿಸಲಾಗುತ್ತಿದೆ. ಏಳು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಐಕ್ಯತಾ ಸಪ್ತಾಹದಲ್ಲಿ ದಿನಕ್ಕೊಂದು ದಿನಾಚರಣೆಯನ್ನಾಗಿ ಆಚರಿಸಲಾಗುವುದು. ಕ್ರಮವಾಗಿ ನ.೧೯ ರಿಂದ ರಾಷ್ಟ್ರೀಯ ಐಕ್ಯತಾ ದಿನ, ಅಲ್ಪಸಂಖ್ಯಾತರ ಕಲ್ಯಾಣ ದಿನ, ಭಾಷಾ ಸೌಹಾರ್ದತಾ ದಿನ, ದುರ್ಬಲ ವರ್ಗಗಳ ದಿನ, ಸಾಂಸ್ಕೃತಿಕ ಏಕತಾ ದಿನ, ಮಹಿಳಾ ದಿನ, ಪರಿಸರ ರಕ್ಷಣಾ ದಿನ ನಡೆಸಲಾಗುವುದು. ಮೊದಲ ದಿನವಾದ ಗುರುವಾರದಂದು ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಹಮ್ಮಿಕೊಳ್ಳಲಾಗಿದೆಯೆಂದು ಪೊಲೀಸ್ ಇನ್ಸ್ಪೆಕ್ಟರ್ ಜಿ.ಪಿ.ರಾಜು ಅವರು ವಿವರಿಸಿದರು.
ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಶಾಖಾಧಿಕ್ಷಕ ಎಂ. ಮೂರ್ತಿ, ನಜೀಮಾಬಾನು, ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್, ಆರ್‌ಎಸ್‌ಐ ಟಿ.ಎ.ಸೋಮರಾಜು, ಪಿಎಸ್‌ಐಗಳು ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos