ಬೆಂಗಳೂರು, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೆ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿದೆ.
ಈಗಾಗಲೇ ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ನಗರದ ಬಿಜೆಪಿ ಕಚೇರಿ ಬಳಿ ಪ್ರಧಾನಿ ಮೋದಿ ಹೆಸರನ್ನುಕೂಗಿ ಬಿಜೆಪಿಗೆ ಜೈಕಾರ ಹಾಡುತ್ತಿದ್ದಾರೆ.