ನೀತಿ ಸಂಹಿತೆ ಉಲ್ಲಂಘನೆ; ಖಡ್ಗ ಹಿಡಿದು ಪೋಸ್ ಕೊಟ್ಟ ಜೋಶಿ, ಅರವಿಂದ್!

ನೀತಿ ಸಂಹಿತೆ ಉಲ್ಲಂಘನೆ; ಖಡ್ಗ ಹಿಡಿದು ಪೋಸ್ ಕೊಟ್ಟ ಜೋಶಿ, ಅರವಿಂದ್!

ಧಾರವಾಡ, ಮಾ.12, ನ್ಯೂಸ್ ಎಕ್ಸ್ ಪ್ರೆಸ್:  ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದಾಗಲೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಹಾಗೂ ಶಾಸಕ ಅರವಿಂದ್ ಬೆಲ್ಲದ ಅವರು ತಲ್ವಾರ್ ಹಿಡಿದ ಪೋಟೋವನ್ನು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ್ದಾರೆ.

ಪ್ರಹ್ಲಾದ್ ಜೋಶಿ ಮತ್ತು ಅರವಿಂದ ಬೆಲ್ಲದ ಕೈಯಲ್ಲಿ ತಲ್ವಾರ್ ಹಿಡಿದ ಪೋಟೋವನ್ನು ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ಆಯುಧ ಪ್ರದರ್ಶಿಸಬಾರದು.

ಆಯುಧ ಹಿಡಿದ ಪೋಟೋ ಕೂಡ ಸಾರ್ವಜನಿಕವಾಗಿ ಹಂಚಿಕೊಳ್ಳುವುದು ಕೂಡ ತಪ್ಪು. ಆದರೆ ಬಿಜೆಪಿ ಕಾರ್ಯಕರ್ತ, ಜೋಶಿ ಹಾಗೂ ಬೆಲ್ಲದ ತಲ್ವಾರ್ ಹಿಡಿದ ಪೋಟೋ ಹಾಕಿ ಮತ್ತೊಮ್ಮೆ ನಾವೇ ಗೆಲ್ಲೋದು ಎಂದು ಪೋಸ್ಟ್ ಮಾಡಿದ್ದಾರೆ.

ಶಕ್ತಿ ಧಾರವಾಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಎರಡು ದಿನಗಳ ಹಿಂದೆ ಧಾರವಾಡದ ಅಶೋಕ ಹೊಟೇಲ್‍ಗೆ ಬಂದಾಗ ಜನಪ್ರತಿನಿಧಿಗಳು ತಲ್ವಾರ್ ಹಿಡಿದು ಪೋಟೋಗೆ ಪೋಸ್ ಕೊಟ್ಟಿದ್ದರು. ಅದೇ ಪೋಟೋವನ್ನು ನೀತಿ-ಸಂಹಿತೆ ಜಾರಿಯಾದ ಬಳಿಕ ಕಾರ್ಯಕರ್ತ ಪೋಸ್ಟ್ ಮಾಡಿ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos