ಸಂತ್ರಸ್ತರಿಗೆ 5 ಸಾವಿರ ಕೋಟಿ ಬಿಡುಗಡೆ ಮಾಡಿ

ಸಂತ್ರಸ್ತರಿಗೆ 5 ಸಾವಿರ ಕೋಟಿ ಬಿಡುಗಡೆ ಮಾಡಿ

ಧಾರವಾಡ, ಅ. 5 : ಕೇಂದ್ರ ಸರ್ಕಾರ 1,200 ಕೋಟಿ ರೂ. ಬಿಡುಗಡೆ ಮಾಡಿದೆ ಅನ್ನೋ ಮಾಹಿತಿ ಕೇಳಿದ್ದೇನೆ. ಕನಿಷ್ಠ ಪಕ್ಷ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ವಿಆರ್ ದೇಶಪಾಂಡ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ವಿ.ದೇಶಪಾಂಡೆ, ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಇಷ್ಟೊಂದು ಪ್ರಮಾಣದಲ್ಲಿ ನೆರೆ ಬರದಿದ್ದರೂ, 16 ಸಾವಿರ ಕೋಟಿ ಬಿಡುಗಡೆ ಮಾಡಿತ್ತು. ಇಂದು ರಾಜ್ಯದ ಬಹುತೇಕ ಜಿಲ್ಲೆಗಳು ಅನಾವೃಷ್ಠಿಗೀಡಾಗಿವೆ. ಸರ್ಕಾರ ನೀಡಿದ ಹಣ ಸಂತ್ರಸ್ತರಿಗೆ ತಲುಪಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ. ರಾಜ್ಯಕ್ಕೆ ಆಗಮಿಸಿರುವ ಹಿನ್ನಲೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಎದುರು ಮಾಜಿ ಸಚಿವ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಫ್ರೆಶ್ ನ್ಯೂಸ್

Latest Posts

Featured Videos