ದಕ್ಷಿಣ ಆಫ್ರಿಕಾ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ನೆದರ್ಲ್ಯಾಂಡ್ಸ್!

ದಕ್ಷಿಣ ಆಫ್ರಿಕಾ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ನೆದರ್ಲ್ಯಾಂಡ್ಸ್!

ಬೆಂಗಳೂರು: ವಿಶ್ವಕಪ್ ಟೂರ್ನಿ ಆರಂಭವಾಗಿ ಎಲ್ಲಾ ತಂಡಗಳು ತಲಾ 3 ಪಂದ್ಯಗಳನ್ನು ಆಡಿದ್ದಾರೆ. ದಕ್ಷಿಣ ಆಫ್ರಿಕಾ ಆಡಿದ ಮೂರು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದೆ ನಿನ್ನೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನೆದರ್ಲ್ಯಾಂಡ್ಸ್ ಮುಖಾಮುಖಿ ಆಗಿತ್ತು.
ಹಿಮಾಚಲ ಪ್ರದೇಶ ಕ್ರಿಕೆಟ್ ಆಸೋಶಿಯನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 38 ರನ್ ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು, ಅಲ್ಲದೆ ನೆದರ್ಲ್ಯಾಂಡ್ಸ್ ತಂಡವನ್ನು 43 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 245 ರನ್ ಗಳಿಗೆ ಕಟ್ಟಿ ಹಾಕಿತು.ನೆದರ್ಲ್ಯಾಂಡ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಎಡ್ವರ್ಡ್ಸ್ 69 ಎಸೆತಗಳಲ್ಲಿ ಹತ್ತು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 78 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು.
ಇದೆ ವೇಳೆ 246 ರನ್ ಗಳ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ನೆದರ್ಲ್ಯಾಂಡ್ಸ್ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ 42.5 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 207 ರನ್ ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.
ದಕ್ಷಿಣ ಆಫ್ರಿಕಾದ ಪರವಾಗಿ ಡೇವಿಡ್ ಮಿಲ್ಲರ್ 43, ಕೇಶವ್ ಮಹಾರಾಜ್ 40 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರೂ ಕೂಡ ಗೆಲುವಿನ ತಡಕ್ಕೆ ಮುಟ್ಟಿಸುವಲ್ಲಿ ವಿಫಲರಾದರು. ಆ ಮೂಲಕ ನೆದರ್ಲ್ಯಾಂಡ್ಸ್ ತಂಡವು 38 ರನ್ ಗಳ ಗೆಲುವು ಸಾಧಿಸಿದೆ.
ನೆದರ್ಲ್ಯಾಂಡ್ಸ್ ತಂಡದ ಪರವಾಗಿ ಶಿಸ್ತಿನ ಬೌಲಿಂಗ್ ದಾಳಿ ನಡೆಸಿದ ಲೋಗನ್ ವ್ಯಾನ್ ಬೇಕ್ 3,ಹಾಗೂ ಪಾಲ್ ವಾನ್ ಮೀಕೆರನ್, ಮರ್ವೆ ಲೀಡೆ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಫ್ರೆಶ್ ನ್ಯೂಸ್

Latest Posts

Featured Videos