ರೋಡಿಗಿಳಿದ ಹೊಸ 100 ಬಿಎಂಟಿಸಿ ಬಸ್ ಗಳು

ರೋಡಿಗಿಳಿದ ಹೊಸ 100 ಬಿಎಂಟಿಸಿ ಬಸ್ ಗಳು

ಬೆಂಗಳೂರು:  ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನ ನಿತ್ಯ ಸಂಚರಿಸುವವರಿಗೆ ರಾಜ್ಯ ಸರ್ಕಾರವು ಇದೀಗ ಸಿಹಿಸುದ್ದಿ ನೀಡಿದ್ದು, ಹೊಸದಾಗಿ 100 ಬಿಎಂಟಿಸಿಗೆ  ಬಸ್‌ಗಳ ಸೇರ್ಪಡೆ ಮಾಡಿದೆ. ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್‌ಗಳನ್ನು  ಲೋಕಾರ್ಪಣೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟ ಮಾತಿನಂತೆ ಈಗಾಗಲೇ ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದು, ಬಿಎಂಟಿಸಿ ಬಸ್ ಗಳನ್ನು ಇದೀಗ ಮೊದಲನೇ ಹಂತದಲ್ಲಿ 100 ಹೊಸ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದಾರೆ.

ಹೌದು, ಬಿಎಂಟಿಸಿಯಲ್ಲಿ ಓಡಾಡುವ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಹೊಸದಾಗಿ 100 ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ  ಮಾಡಿದ್ದಾರೆ.

ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: Valmiki scandal: ಚಾರ್ಜ್‌ಶೀಟ್‌ನಿಂದ ಕೋಟಿ ಕೋಟಿ ಲೂಟಿ ಸತ್ಯ ಬಟಾ ಬಯಲು

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್,  ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos