ಬೆಂಗಳೂರು: ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ ಮೋಡಿ ಮಾಡಿದ್ದಾರೆ. ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ ತನ್ನ ಅನುಭವ ಧಾರೆಯೆರೆದ ಅಶ್ವಿನ್ ಕೇವಲ 51 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದರು.
ಜೆಎಸ್‌ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣ ಕಾಂಪ್ಲೆಕ್ಸ್ ನಲ್ಲಿ ನಡೆಯುತ್ತಿರುವ ಇಂಡಿಯಾ ವಿರುದ್ಧ ಪಂದ್ಯದಲ್ಲಿ ಭಾರತ ಅಶ್ವಿನ್ ಐದು ವಿಕೆಟ್ ಅನ್ನು ಗಳಿಸಿದ್ದಾರೆ.
ಆರ್ ಅಶ್ವಿನ್ ತವರಿನಲ್ಲಿ ಆಡಿದ ಟೆಸ್ಟ್ಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಮೂರನೇ ದಿನದ ಆಟದಲ್ಲಿ 51 ರನ್ಗಳಿಗೆ ಐದು ವಿಕೆಟ್ ಪಡೆದ ಅಶ್ವಿನ್ ಈ ಮೇಲುಗಲ್ಲು ಸ್ಥಾಪಿಸಿದ್ದಾರೆ.
ಇದಕ್ಕೂ ಮೊದಲು ಅನಿಲ್ ಕುಂಬ್ಳೆ 350 ವಿಕೆಟ್ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರು ಅಶ್ವಿನಿ 351 ವಿಕೆಟ್ ಗಳಿಸಿದ್ದಾರೆ.