ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಹೆಜ್ಜೆ

ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಹೆಜ್ಜೆ

ಬೆಂಗಳುರು, ಸೆ. 18: ಟ್ರಾಫಿಕ್ ನಿಯಂತ್ರಣಕ್ಕೆ ಅಧಿಕಾರಿಗಳು ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ನಗರದಲ್ಲಿ ಮೆಟ್ರೋ ಸೇವೆ ಆರಂಭಗೊಂಡಿದ್ದರೂ ಟ್ರಾಫಿಕ್ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೊಸ ಕ್ರಮಕ್ಕೆ ಮುಂದಾಗಿದ್ದು, ಟ್ರಾಫಿಕ್ ವಾರ್ಡನ್ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.

ನಗರದಲ್ಲಿ ಹಾಲಿ 390 ಟ್ರಾಫಿಕ್ ವಾರ್ಡನ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನು, 2,500ಕ್ಕೆ ಏರಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಹೀಗಾಗಿ ಸ್ವಯಂ ಪ್ರೇರಿತವಾಗಿ ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ಇಚ್ಛೆ ಪಡುವವರು ಹತ್ತಿರದ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು.

ಸುಲಲಿತ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ಹೀಗಾಗಿ ಟ್ರಾಫಿಕ್ ವಾರ್ಡನ್ಗಳ ಸಂಖ್ಯೆಯನ್ನು 390ರಿಂದ 2500ಕ್ಕೆ ಏರಿಕೆ ಮಾಡುತ್ತಿದ್ದೇವೆ. ಹೀಗಾಗಿ ಆಸಕ್ತರು ಇದಕ್ಕೆ ಕೈ ಜೋಡಿಸಬಹುದು. ಇದಕ್ಕಾಗಿ ನೀವು ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ,ಎಂದು ಕೋರಿದ್ದಾರೆ. ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ.

ಯಾರಿಗೆ ಸಮಾಜ ಸೇವೆ ಮಾಡಬೇಕೆನ್ನುವ ಇಚ್ಛೆ ಇರುತ್ತದೆಯೋ ಅವರು ಹತ್ತಿರದ ಟ್ರಾಫಿಕ್ ಠಾಣೆಗೆ ಭೇಟಿ ನೀಡಬಹುದು. ನಿಮಗೆ ಹೊಂದಾಣಿಕೆ ಆಗುವ ಸಮಯದಲ್ಲಿ, ನಿಮಗಿಷ್ಟದ ಜಾಗದಲ್ಲಿ ನೀವು ಟ್ರಾಫಿಕ್ ನಿಯಂತ್ರಣ ಮಾಡಬಹುದು.

 

 

ಫ್ರೆಶ್ ನ್ಯೂಸ್

Latest Posts

Featured Videos