ಬಲಿಷ್ಠ ನ್ಯೂಜಿಲೆಂಡ್ ಗೆ ಶಾಕ್ ನೀಡಲು ಶಾಹಿದಿ ಪಡೆ ರೆಡಿ!

ಬಲಿಷ್ಠ ನ್ಯೂಜಿಲೆಂಡ್ ಗೆ ಶಾಕ್ ನೀಡಲು ಶಾಹಿದಿ ಪಡೆ ರೆಡಿ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ. ಇಂದು ಬಲಿಷ್ಠ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಏಕದಿನ ವಿಶ್ವಕಪ್ನ 16 ನೇ ಪಂದ್ಯದಲ್ಲಿ ಇಂದು ಬಲಿಷ್ಠ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ನಲ್ಲಿ ಉಭಯ ತಂಡಗಳಿಗೂ ಇದು ನಾಲ್ಕನೇ ಪಂದ್ಯವಾಗಿದೆ. ಇದರಲ್ಲಿ ನ್ಯೂಜಿಲೆಂಡ್ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿದ್ದರೆ, ಅಫ್ಘಾನಿಸ್ತಾನ ತನ್ನ ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ ಗೆಲುವು ಸಾಧಿಸಿತು. ಇದೀಗ ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ ಎರಡನೇ ಗೆಲುವು ಸಾಧಿಸಲಿದೆಯೇ ಎಂಬ ಕುತೂಹಲ ಮೂಡಿದೆ. ಚೆನ್ನೈನಲ್ಲಿ ಎರಡು ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.
ಉತ್ತಮ ಫಾರ್ಮ್‌ನಲ್ಲಿರುವ ನ್ಯೂಜಿಲೆಂಡ್ ತಂಡ ವಿಶ್ವಕಪ್‌ನಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದು ಇಂಗ್ಲೆಂಡ್, ನೆದರ್‌ಲ್ಯಾಂಡ್ ಮತ್ತು ಬಾಂಗ್ಲಾದೇಶವನ್ನು ಸೋಲಿಸಿದೆ. ಬಾಂಗ್ಲಾದೇಶ ಮತ್ತು ಭಾರತದ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಸೋತ ನಂತರ, ಅಫ್ಘಾನಿಸ್ತಾನವು ತನ್ನ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಆತ್ಮ ವಿಶ್ವಾಸದಿಂದ ಬೀಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos