ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕ್ಷಣ ಕ್ಷಣಕ್ಕೂ ರಂಗೆರುತ್ತಿದ್ದು ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರು ನಿನ್ನೆ (ಗುರುವಾರ ಅಕ್ಟೋಬರ್ 24) ರಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದು ಇಂದು (ಶುಕ್ರವಾರ ಅಕ್ಟೋಬರ್ 25) ರಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಹೌದು, ನವಂಬರ್ 13 ರಂದು ನಡೆಯಲಿರುವ ಉಪಚುನಾವಣೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದ್ದು ಈಗಾಗಲೇ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇನ್ನು ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿದಿದ್ದು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಎರಡು ಬಾರಿ ಸೋಲನ್ನು ಅನುಭವಿಸಿರುವ ನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇದೀಗ ಮತ್ತೊಮ್ಮೆ ಅಗ್ನಿಪರೀಕ್ಷೆಗೆ ಇಳಿದಿದ್ದಾರೆ.
ಹೌದು, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಅಲ್ಲಿಗೆ ಚನ್ನಪಟ್ಟಣದಲ್ಲಿ ಯೋಗೇಶ್ವರ್-ನಿಖಿಲ್ ಕುಮಾರಸ್ವಾಮಿ ನಡ್ವೆ ನೇರಾನೇರ ಸ್ಟಾರ್‌ವಾರ್ ನಡೆಯಲಿದೆ.
ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇಂದು (ಶುಕ್ರವಾರ ಅ. 25) ರಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮಧ್ಯಾಹ್ನ 12ಗಂಟೆಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.