ಉಪಾಚುನಾವಣೆ; ನಿಖಿಲ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ?

ಉಪಾಚುನಾವಣೆ; ನಿಖಿಲ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ?

ಚನ್ನಪಟ್ಟಣ: ಚನ್ನಪಟ್ಟಣ ಉಪಾಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಟಿಕೆಟ್ ಗಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆ ಹೈ ವೋಲ್ಟೇಜ್ ಪೈಪೋಟಿ ನಡೆಯುತ್ತಿದ್ದು ಡಿಕೆ ಬ್ರದರ್ಸ್ ಚೆನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಗಾಗಿ ಎಲ್ಲಾ ರೀತಿ ತಯಾರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿಯವರು ಚನ್ನಪಟ್ಟಣ ಬೈ ಎಲೆಕ್ಷನ್ ಗೆ ಎನ್​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ.

ಹೌದು, ಚನ್ನಪಟ್ಟಣ ಉಪಚುನಾವಣೆಯ ಅಖಾಡಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಇಡಿಸಲು ಎಲ್ಲಾ ರೀತಿ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದ್ದು ನಿನ್ನೆ (ಭಾನುವಾರ ಅ.06) ಸಭೆ ಒಂದರಲ್ಲಿ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಬೇಕೆಂದು ಜೆಡಿಎಸ್ ನ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಯೆಸ್..ಚನ್ನಪಟ್ಟಣ ಅಖಾಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್​ನಲ್ಲಿ ಭರ್ಜರಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಿದೆ‌. ಇದರಿಂದ ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗುವುದು ಎಲ್ಲ ಜೆಡಿಎಸ್ ಕಾರ್ಯಕರ್ತರ ಒಮ್ಮತವಾಗಿದೆ.

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಚರ್ಚೆ ಜೋರಾಗಿದೆ. ಮತ್ತೊಂದೆಡೆ HD ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಹೆಚ್​ಡಿಕೆ, ನಿಖಿಲ್​ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ರಾಧಾಮೋಹನ್​ ದಾಸ್ ಅವರು ಕ್ಷೇತ್ರದ ವಿಚಾರದಲ್ಲಿ ಗೊಂದಲವಿಲ್ಲ ಎಂದಿದ್ದಾರೆ.

ಪರಿಷತ್​ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಮನವೊಲಿಕೆ ಬಗ್ಗೆ ಚರ್ಚೆ ನಡೆದಿದೆ. JDS, ಬಿಜೆಪಿ ಒಟ್ಟಾಗಿ ಹೋದರೆ ಮಾತ್ರ ಕಾಂಗ್ರೆಸ್ ಸೋಲಿಸಬಹುದು. ಇಲ್ಲವಾದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ ಲಾಭ ಪಡೆಯುತ್ತದೆ. ಸಿ.ಪಿ.ಯೋಗೇಶ್ವರ್​ ಮನವೊಲಿಸಲು H.D.ಕುಮಾರಸ್ವಾಮಿ ರಾಧಾಮೋಹನ್ ಅವರಿಗೆ ಸಲಹೆ ನೀಡಿದ್ದಾರೆ. ಹೀಗಾಗಿ‌‌‌ ಹೆಚ್​.ಡಿ.ಕುಮಾರಸ್ವಾಮಿ ನಡೆ ಕುತೂಹಲ ಮೂಡಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos