ಮೈತ್ರಿ ಧರ್ಮ ಪಾಲಿಸದೇ ಬೆನ್ನಿಗೆ ಚೂರಿ ಹಾಕಿದ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ

ಮೈತ್ರಿ ಧರ್ಮ ಪಾಲಿಸದೇ ಬೆನ್ನಿಗೆ ಚೂರಿ ಹಾಕಿದ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ

ಮದ್ದೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಕಣಕ್ಕಿಳಿದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲಿಸದೇ ಹಿರಿಯ ಜೀವಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಸೋಲಿಸಲು ಪರೋಕ್ಷವಾಗಿ ಬೆಂಬಲ ನೀಡಿದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಹೊರವಲಯದ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಖಂಡರು ಮತ್ತು ಕಾರ್ಯಕರ್ತರ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 2019ರ ಚುನಾವಣೆಯ ಕಹಿ ಘಟನೆ ಮತ್ತೆ ಮರುಕಳಿಸಬಾರದು. ಎರಡು ಪಕ್ಷಗಳ ಮುಖಂಡರು, ಕಾರ್ಯಕರ್ತರು ಮೈತ್ರಿ ಧರ್ಮ ಪಾಲಿಸಬೇಕು ಎಂದು ಮನವಿ ಮಾಡಿದರು.

ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos