ನಿಖಿಲ್ ಗೆ ಬೆಂಬಲಿಸಲ್ಲ: ಪ್ರಸನ್ನ

ನಿಖಿಲ್ ಗೆ ಬೆಂಬಲಿಸಲ್ಲ: ಪ್ರಸನ್ನ

ಮಂಡ್ಯ, ಮಾ. 12, ನ್ಯೂಸ್ ಎಕ್ಸ್ ಪ್ರೆಸ್: ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸುಲಮತಾ ಅವರು ಕಣಕ್ಕಿಳಿಯಬೇಕು ಇಲ್ಲವೇ ಜೆಡಿಎಸ್ ಸುಮಲತ ಅವರಿಗೆ ಸೀಟು ಕೋಡಬೇಕು.

ಮಂಡ್ಯ ಜಿಲ್ಲೆಯಲ್ಲಿ ನಿಖಿಲ್ ಅವರಿಗೆ ನಾವು ಬೆಂಬಲ ನೀಡುವುದಿಲ್ಲ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದರು. ಮಂಡ್ಯದಿಂದ 2019ರ ಲೋಕಸಭಾ ಚುನಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ, ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಿಖಿಲ್ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್ ಆದೇಶವನ್ನು ನಾವು ಪಾಲಿಸುತ್ತೇವೆ. ಆದರೆ, ಜನರು ಕೇಳಬೇಕಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಾಗಿ ಕೊನೆಯ ಕ್ಷಣದ ತನಕ ನಾವು ಕಾಯುತ್ತೇವೆ ಎಂದು ಪ್ರಸನ್ನ ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಹೇಳಿಕೆ ನೀಡಿದ್ದು, ‘ಮಂಡ್ಯ ಜಿಲ್ಲೆಯ ಜನರ ಅಭಿಮಾನವನ್ನು ದುರುಪಯೋಗಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ. ನಿಖಿಲ್ ಸ್ಪರ್ಧೆ ಬಗ್ಗೆ ಪಕ್ಷದ ಮುಖಂಡರು ತೀರ್ಮಾನ ಮಾಡುವುದಲ್ಲ. ಜನರೇ ತೀರ್ಮಾನ ಮಾಡುತ್ತಾರೆ’ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos