ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ಇಲ್ಲ

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ಇಲ್ಲ

ಬೆಂಗಳೂರು, ಏ. 4 : ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯೊಳಗೆ ಉಚಿತ ಊಟದ ಬದಲು ಹಿಂದೆ ಜಾರಿಯಲ್ಲಿದ್ದ ರಿಯಾಯಿತಿ ದರದಲ್ಲಿ ಊಟ–ಉಪಾಹಾರ ನೀಡಲು ಸರ್ಕಾರ ತೀರ್ಮಾನಿಸಿದೆ.

ಕೊರೊನಾ ಸೋಂಕು ಹರಡಲು ಆರಂಭಿಸಿದ ಮೇಲೆ ಹೋಟೆಲ್‌ಗಳನ್ನು ಬಂದ್ ಮಾಡಲಾಗಿತ್ತು. ಈ ಹೊತ್ತಿನಲ್ಲಿ ಬಡವರು ಊಟಕ್ಕೆ ಪರದಾಡುವುದನ್ನು ತಪ್ಪಿಸಲು ಕೆಲವು ಕಡೆಗಳಲ್ಲಿ ಉಚಿತವಾಗಿ ಊಟ ಪೂರೈಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿತ್ತು. ‘ಬಡವರಿಗೆ ಸರ್ಕಾರ ಹಲವು ಯೋಜನೆಗಳ ಮೂಲಕ ಹಣ, ಧಾನ್ಯ ನೀಡುತ್ತಿರುವುದರಿಂದ ಶನಿವಾರದಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನ ವ್ಯವಸ್ಥೆಯೇ ಅಂದರೆ ಸಬ್ಸಿಡಿ ದರದಲ್ಲಿ ಊಟ ನೀಡುವ ನಿಯಮ ಜಾರಿಗೆ ಬರಲಿದೆ’ ಎಂದು ಸರ್ಕಾರ ತಿಳಿಸಿದೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನ ದರದಲ್ಲಿ ಆಹಾರ ಪೂರೈಸುವ ವ್ಯವಸ್ಥೆ ಮಾಡಲಾಗುತ್ತಿದೆ, ಆಹಾರದ ದುರ್ಬಳಕೆ ಆಗುವುದನ್ನು ತಪ್ಪಿಸುವ ಉದ್ದೇಶವೂ ಇದರ ಹಿಂದೆ ಇದೆ’ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್  ಸುದ್ದಿಗಾರರಿಗೆ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos