ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲಾ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲಾ

ಬೆಂಗಳೂರು: ಮಾರ್ಚ್ 7 ರಂದು ನಡೆದ ದ್ವಿತೀಯ ಪಿಯುಸಿ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತದೆ ಎಂಬ ವದಂತಿ ಹಬ್ಬಿಸಲಾಗಿತ್ತು.

ಇದಕ್ಕೆ ಪಿಯುಸಿ ಮಂಡಳಿ ಸ್ಪಷ್ಟನೆ ನೀಡಿದೆ. ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಕಷ್ಟಕರವಾಗಿದ್ದರಿಂದ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎಂದು ವದಂತಿ ಹಬ್ಬಿಸಲಾಗುತ್ತಿದ್ದು ಇದು ಕೇವಲ ವಾದಂತಿಯಷ್ಟು ಯಾವುದೇ ಗ್ರೇಸ್ ಮಾರ್ಕ್ಸ್ ನೀಡಲಾಗುವುದಿಲ್ಲ ಮಾರ್ಚ್ 10 ರಂದು ಹೊರಪಡಿಸಿದ ಸುತ್ತೋಲೆ ನಕಲಿ ಎಂದು ಮಂಡಳಿ ತಿಳಿಸಿದೆ.

ಈ ಬಗ್ಗೆ TNIE ಯೊಂದಿಗೆ ಮಾತನಾಡಿದ ಪ್ರಭಾರಿ ಮತ್ತು ಪಿಯುಸಿ ಪರೀಕ್ಷೆಗಳ ನಿರ್ದೇಶಕ ಗೋಪಾಲಕೃಷ್ಣ ಎಚ್‌ಎನ್, ಸುತ್ತೋಲೆ ನಕಲಿಯಾಗಿದ್ದು, ಮಂಡಳಿಯಿಂದ ಹೊರಡಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಇಲಾಖೆ ಗ್ರೇಸ್ ಮಾರ್ಕ್‌ಗಳನ್ನು ನೀಡಲಿದೆ ಎಂದು ಸುತ್ತೋಲೆ ಇಂಟರ್ನೆಟ್, ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಆದರೆ ನಾವು ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪತ್ರಿಕೆಯಲ್ಲಿ ಕಾಣಿಸಿಕೊಂಡ ಎಲ್ಲಾ ಪ್ರಶ್ನೆಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಭಾಗವಾಗಿತ್ತು. ಈಗ ಎಲ್ಲೆಡೆ ಹರಿದಾಡುತ್ತಿರುವ ಸುತ್ತೋಲೆ ಮಂಡಳಿಯ ಅಧಿಕೃತ ಸುತ್ತೋಲೆಯಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos