ಬೆಂಗಳೂರು: ಮುಡಾ ಸಂಕಷ್ಟದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೀಗ ಬಿಜೆಪಿ ನಾಯಕರು ಒಂದಲ್ಲ ಒಂದು ಟೀಕೆಗಳನ್ನು ಮಾಡುತ್ತಿದ್ದು, ಇದೀಗ ಬಿಜೆಪಿಯು ಕಾಂಗ್ರೆಸ್ ಆಡಳಿತದಲ್ಲಿ ಉದ್ಯಮವೂ ಇಲ್ಲ, ಉದ್ಯೋಗವೂ ಇಲ್ಲ ಎಂದು ಟೀಕಿಸಿದೆ.
ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಬಿಜೆಪಿಯು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯಮಸ್ನೇಹಿ ವಾತಾವರಣವನ್ನು ಹಾಳು ಮಾಡಿದೆ ಎಂದು ಬಿಜೆಪಿ ಟೀಕಿಸಿದೆ. ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಅಸಮರ್ಪಕ ಆಡಳಿತದಿಂದ ಅನೇಕ ಉದ್ಯಮಗಳು ರಾಜ್ಯ ತೊರೆದು ಬೇರೆ ಕಡೆ ಹೋಗುತ್ತಿವೆ ಎಂದೂ ಬಿಜೆಪಿ ಎಕ್ಸ್ ಸಂದೇಶದ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹೊಂದಿಸಲು ಆಗದಿರುವ ಸರ್ಕಾರ ರೇಷನ್ ಕಾರ್ಡ್ ರದ್ದು ಮಾಡಲು ಹೊರಟಿದೆ: ಆರ್ ಅಶೋಕ್
ನಮ್ಮ ಬಿಜೆಪಿ ಸರ್ಕಾರದ ಆಡಳಿತದ ನೀತಿ, ನಾವು ರಾಜ್ಯದಲ್ಲಿ ಮೂಡಿಸಿದ್ದ ಉದ್ಯಮಸ್ನೇಹಿ ವಾತಾವರಣದಿಂದ ಇಡೀ ಭಾರತದಲ್ಲೇ ಅತಿ ಹೆಚ್ಚಿನ ವಿದೇಶೀ ಬಂಡವಾಳ ಹೂಡಿಕೆ ನಮ್ಮ ಕರ್ನಾಟಕಕ್ಕೆ ಹರಿದು ಬಂದಿತ್ತು. ಜಗತ್ತೇ ಕೋವಿಡ್ ಮಹಾಮಾರಿಯಿಂದ ತತ್ತರಿಸಿ ಆರ್ಥಿಕವಾಗಿ ಕುಸಿದ ಸಮಯದಲ್ಲೂ ನಮ್ಮ ಆಡಳಿತ ವೈಖರಿಯಿಂದ ಅವೆಲ್ಲವನ್ನೂ ಸವಾಲಾಗಿ ಸ್ವೀಕರಿಸಿ ಎಫ್‌ಡಿಐ ನೀತಿ ಸುಧಾರಣೆಗಳ ಕುರಿತು ನಾವು ಕೈಗೊಂಡ ಕ್ರಮಗಳಿಂದ ಕರ್ನಾಟಕವನ್ನು ಎಫ್‌ಡಿಐ ನಲ್ಲಿ ದೇಶದಲ್ಲಿಯೇ ನಂಬರ್-1 ಸ್ಥಾನಕ್ಕೆ ಏರಿಸಿದ್ದೆವು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದ ಅಸಮರ್ಥ ಆಡಳಿತದಿಂದ ಉದ್ಯಮಗಳಿಗೆ ಸರಿಯಾದ ಮೂಲಸೌಕರ್ಯ ಕಲ್ಪಿಸದೇ ಹಲವಾರು ಉದ್ಯಮಗಳು ರಾಜ್ಯ ತೊರೆದು ಬೇರೆ ಕಡೆ ಹೋದವು. ಹಾಗೂ ಉದ್ಯಮಿಗಳ ಕುರಿತ ಕಡೆಗಣನೆಯಿಂದ ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆ ತಗ್ಗಿದ ಪರಿಣಾಮ ಕರ್ನಾಟಕವು ಇಂದು ಎರಡನೇ ಸ್ಥಾನಕ್ಕೆ ಕುಸಿದಿದೆ ಎಂದು ಬಿಜೆಪಿ ಟೀಕಿಸಿದೆ.
ಕಾಂಗ್ರೆಸ್ ಆಡಳಿತದಲ್ಲಿ ಉದ್ಯಮವೂ ಇಲ್ಲ, ಉದ್ಯೋಗವೂ ಇಲ್ಲ!
ನಮ್ಮ ಬಿಜೆಪಿ ಸರ್ಕಾರದ ಆಡಳಿತದ ನೀತಿ, ನಾವು ರಾಜ್ಯದಲ್ಲಿ ಮೂಡಿಸಿದ್ದ ಉದ್ಯಮಸ್ನೇಹಿ ವಾತಾವರಣದಿಂದ ಇಡೀ ಭಾರತದಲ್ಲೇ ಅತಿ ಹೆಚ್ಚಿನ ವಿದೇಶೀ ಬಂಡವಾಳ ಹೂಡಿಕೆ ನಮ್ಮ ಕರ್ನಾಟಕಕ್ಕೆ ಹರಿದು ಬಂದಿತ್ತು. ಜಗತ್ತೇ ಕೋವಿಡ್ ಮಹಾಮಾರಿಯಿಂದ ತತ್ತರಿಸಿ ಆರ್ಥಿಕವಾಗಿ ಕುಸಿದ ಸಮಯದಲ್ಲೂ… pic.twitter.com/6ABQJg05uY
— BJP Karnataka (@BJP4Karnataka) September 10, 2024