ಮಧ್ಯಂತರ ಚುನಾವಣೆ ಬರಲ್ಲ: ಬಿ.ಎನ್. ಬಚ್ಚೇಗೌಡ

ಮಧ್ಯಂತರ ಚುನಾವಣೆ ಬರಲ್ಲ: ಬಿ.ಎನ್. ಬಚ್ಚೇಗೌಡ

ಚಿಕ್ಕಬಳ್ಳಾಪುರ, ಸೆ. 17: ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರು, ರಾಜ್ಯದಲ್ಲಿ ಬಹುಮತದ ಸರ್ಕಾರ ಆಡಳಿತದ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್, ಜೆಡಿಎಸ್ ನಾಯಕರು ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆಯೆಂದು ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಬಹುಮತದ ಸರ್ಕಾರ ಇದೆ. ಇತಂಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಬರಲು ಹೇಗೆ ಸಾಧ್ಯವೆಂದರು. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ 4 ವರ್ಷಗಳ ಅಧಿಕಾರ ಪೂರೈಸಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos