ಇಲ್ಲಿ 48 ಗಂಟೆಗಳ ಕಾಲ ಎಣ್ಣೆ ಸಿಗಲ್ಲ!

ಇಲ್ಲಿ 48 ಗಂಟೆಗಳ ಕಾಲ ಎಣ್ಣೆ ಸಿಗಲ್ಲ!

ಬೆಂಗಳೂರು, ಡಿ. 04: ರಾಜ್ಯದಲ್ಲಿ ನಾಳೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರಿನ 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ 4 ಕ್ಷೇತ್ರಗಳ ವ್ಯಾಪ್ತಿಯಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಚುನಾವಣಾ ಆಯೋಗದ ಆದೇಶದಂತೆ ಪೊಲೀಸ್ ಇಲಾಖೆ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದೆ. ಬೆಂಗಳೂರಿನ ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ ಹಾಗೂ ಕೆ.ಆರ್.ಪುರಂ ವಿಧಾನಸಭಾ ವ್ಯಾಪ್ತಿಯಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos