ದಾಖಲೆ ಇಲ್ಲದ 2 ಕೋಟಿ ರೂ. ಜಪ್ತಿ

ದಾಖಲೆ ಇಲ್ಲದ 2 ಕೋಟಿ ರೂ. ಜಪ್ತಿ

ಮೈಸೂರು, ನ. 27 : ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಚುನಾವಣಾಧಿಕಾರಿಗಳು ಅಕ್ರಮ ಹಣ, ಮದ್ಯ, ವಸ್ತುಗಳು ಸಾಗಿಸಬಾರದೆಂದು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ಹುಣಸೂರು ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬೊಲೆರೋ ವಾಹನದಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ವಾಹನದಲ್ಲಿ 3 ಚೀಲಗಳಲ್ಲಿ ಹಣವನ್ನು ಇಟ್ಟುಕೊಂಡು ಕೊಂಡೊಯ್ಯಲಾಗುತ್ತಿತ್ತು. ಎಂ.ಡಿ.ಸಿ.ಸಿ ಬ್ಯಾಂಕಿನ ಇಬ್ಬರು ನೌಕರರು ಹಣದ ಜೊತೆ ಪ್ರಯಾಣ ಮಾಡುತ್ತಿದ್ದರು. ಪಿರಿಯಾಪಟ್ಟಣ ಬ್ಯಾಂಕಿಗೆ ಇದನ್ನು ಸಾಗಿಸುತ್ತಿರುವುದಾಗಿ ಬ್ಯಾಂಕ್ ನೌಕಕರು ಪೊಲೀಸರಿಗೆ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos