ಇಂದು ನಾಮಪತ್ರ ಸಲ್ಲಿಸಿದ ಸುನಿಲ್ ಬೋಸ್

ಇಂದು ನಾಮಪತ್ರ ಸಲ್ಲಿಸಿದ ಸುನಿಲ್ ಬೋಸ್

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಇಂದು ನಾಮಪತ್ರ ಸಲ್ಲಿಸಿದ್ದರು ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಸಚಿವ ಮಹದೇವಪ್ಪ ಮತ್ತಿತ್ತರು ಉಪಸ್ಥಿತಿ ಇದ್ದರು ಇದೇ ರೀತಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಇಂದು ರೋಡ್ ಶೋ ನಡೆಸಿದರು. ಭುವನೇಶ್ವರಿ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ರೋಡ್ ಶೋ ನಡೆಸಿದ ಅವರು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಟೀಕಾಸಮರ ನಡೆಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್​, ಡಾ.ಜಿ.ಪರಮೇಶ್ವರ್, ಕೆ.ವೆಂಕಟೇಶ್, ಸತೀಶ್ ಜಾರಕಿಹೋಳಿ, ಡಾ.ಎಚ್.ಸಿ.ಮಹದೇವಪ್ಪ, ಯತೀಂದ್ರ ಸಿದ್ದರಾಮಯ್ಯ, ಶಾಸಕ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ ಸೇರಿದಂತೆ ಇತರ ನಾಯಕರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos