ರಾಜ್ಯದಲ್ಲಿ ಮೊದಲ ದಿನವೇ 25 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಮೊದಲ ದಿನವೇ 25 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಸಂಸದರಾದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಬ್ರಿಜೇಸ್ ಚೌತಲ ಸೇರಿದಂತೆ 25 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ಡಿ.ಕೆ.ಸುರೇಶ್ರವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರು ಸ್ಪರ್ಧೆಗಿಳಿದಿದ್ದರೆ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ 23 ಪುರುಷ ಹಾಗೂ ಇಬ್ಬರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.25 ಅಭ್ಯರ್ಥಿಗಳಿಂದ ಒಟ್ಟು 29 ನಾಮಪತ್ರಗಳನ್ನು ಸಲ್ಲಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos