ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೆ.ಎಸ್ ಈಶ್ವರಪ್ಪ ನಿರ್ಧಾರ!

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೆ.ಎಸ್ ಈಶ್ವರಪ್ಪ ನಿರ್ಧಾರ!

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ.

ಹೌದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಬೆಂಬಲಿಗರ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಪಕ್ಷ ಉಳಿಸಲು ನನ್ನ ಈ ಹೋರಾಟ ನಾನು ಹಿಂದುತ್ವ ಮೇಲೆ ಚುನವಣೆ ಮಾಡುತ್ತೇನೆ. ಬಿವೈ ರಾಘವೇಂದ್ರ ಲಿಂಗಾಯತ ಮೇಲೆ ಚುನಾವಣೆ ಮಾಡುತ್ತಾರೆ ಎಂದಿದ್ದಾರೆ.

ಸ್ವತಂತ್ರವಾಗಿ ಸ್ಪರ್ಧಿಸಿ ನಾನು ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಹೇಳಿದರು. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದರು.

ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಗೆದ್ದರೆ ಮೋದಿಯನ್ನೇ ಬೆಂಬಲಿಸುತ್ತೇನೆ, ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಶ್ರಮಿಸೋಣ. ಮೋದಿ ಪ್ರಧಾನಿಯಾದ ನಂತರ ನಾವೆಲ್ಲರೂ ಸೇರಿ ಸಂಭ್ರಮಿಸೋಣ. ಹಾಗಾಗಿ ಮೋದಿ, ಪಕ್ಷದ ಪರವಾಗಿ ಕೆಲಸ ಮಾಡಬೇಕೆಂದು ಈಶ್ವರಪ್ಪ ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos