ಉತ್ತರ ಪ್ರದೇಶದಲ್ಲಿ ಭೀಕರ ದುರಂತ

ಉತ್ತರ ಪ್ರದೇಶದಲ್ಲಿ ಭೀಕರ ದುರಂತ

ಕನ್ನೌಜ್, ಜ.11 : ಬಸ್ ಮತ್ತು ಟ್ರಕ್ ಮುಖಾಮುಖಿ ಭೀಕರ ಡಿಕ್ಕಿಯಾಗಿ ಉತ್ತರಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ.
ಉತ್ತರಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ಸಂಪೂರ್ಣ ಸುಟ್ಟು ಹೋಗಿದೆ. 20ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾಗಿದ್ದು, 25ಕ್ಕೂ ಅಧಿಕ ಜನ ತೀವ್ರ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಫರೂಖಾಬಾದ್ನಿಂದ ಬಸ್ ರಾಜಸ್ತಾನದ ಜೈಪುರ್ಗೆ ತೆರಳುತ್ತಿತ್ತು. ಬಸ್ನಲ್ಲಿ 45ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಬಸ್ನ ಡೀಸೆಲ್ ಟ್ಯಾಂಕ್ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿತು.

ಫ್ರೆಶ್ ನ್ಯೂಸ್

Latest Posts

Featured Videos