ಕೊರೋನಾ ಸೋಂಕಿತರ ಪತ್ತೆಗೆ ಸೂಚನೆ

ಕೊರೋನಾ ಸೋಂಕಿತರ ಪತ್ತೆಗೆ ಸೂಚನೆ

ದೇವನಹಳ್ಳಿ: ಕೊರೋನಾ ಸೋಂಕಿತರ ಪತ್ತೆಗಾಗಿ ಜಿಲ್ಲೆಯಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸೂಚಿಸಿದರು. ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ನಡೆದ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಕುರಿತ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕೊರೋನಾ ಪರೀಕ್ಷೆಗೆ ಒಳಪಡಿಸುವ ಮೂಲಕ ಹರಡುವಿಕೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮ
ಕೈಗೊಳ್ಳಬೇಕು. ಡಯಾಲಿಸಿಸ್ ಹಾಗೂ ಇನ್ನಿತರ ತೀ ವ್ರ ಆರೋಗ್ಯ ಸಮಸ್ಯೆಯಿಂದ ಬಳುತ್ತಿರುವರಿಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ದಾಖಲಿಸಿ ಶೀಘ್ರವಾಗಿ ಚಿಕಿತ್ಸೆ ನೀಡಲು ಕ್ರಮವಹಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಕೊರೋನಾ ಸೋಕಿತರಿಗಾಗಿಯೇ ಜಿಲ್ಲೆ ಸರ್ಕಾರಿ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗಿದೆ. ೫೧ಗಂಟಲು ದ್ರವ ಮಾದರಿ ಸಂಗ್ರಹ ಕೇಂದ್ರಗಳು, ೬೧ ಫೀವರ್ ಕ್ಲಿನಿಕ್ಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಹೋಮ್ ಐಸೋಲೇಷನ್ ಹಾಗೂ ಕ್ವಾರಂಟೈನ್ ಸೆಂಟರ್ಗಳಲ್ಲಿರುವ ಕೊರೋನಾ ಸೊಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಸೋಂಕಿನಿಂದ ಮೃತರಾದವರ ದೇಹ ಸಾಗಿಸಲು ತಾಲ್ಲೂಕುವಾರು ಒಂದು ಆಂಬುಲೆನ್ಸ್ ಮೀಸಲಿಡಲಾಗಿದೆ’ ಎಂದು ಹೇಳಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos