ಮಿತಿ ಮೀರಿ ಪ್ರವೇಶ ಹೈಕೋಟ್ ನೊಟೀಸ್

ಮಿತಿ ಮೀರಿ ಪ್ರವೇಶ ಹೈಕೋಟ್ ನೊಟೀಸ್

ಬೆಂಗಳೂರು, ನ. 05: ರಾಜ್ಯದ 24 ಕಾನೂನು ಕಾಲೇಜುಗಳಲ್ಲಿ ನಿಗದಿತ ಪ್ರವೇಶ ಮಿತಿಗಿಂತ ಹೆಚ್ಚಿನ ಅಭ್ಯರ್ಥಿಗಳಿಗೆ ಪ್ರವೇಶ ಮಾಡಿಕೊಳ್ಳಲಾಗುತ್ತಿದೆ ಎಂದು ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಕಾನೂನು ವಿವಿ, ಭಾರತೀಯ ವಕೀಲರ ಪರಿಷತ್ ಹಾಗೂ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಬಿ. ವಿಜಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ಎಲ್ಲ 24ಕಾನೂನು ಕಾಲೇಜುಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಕರ್ನಾಟಕ ರಾಜ್ಯ ಕಾನೂನು ವಿವಿ ವ್ಯಾಪ್ತಿಗೆ ಬರುವ ರಾಜ್ಯದ 24 ಕಾನೂನು ಕಾಲೇಜುಗಳಲ್ಲಿ 2014 ರಿಂದ 2018 ರವರೆಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರವೇಶ ನೀಡಲಾಗಿದೆ. ಇದಕ್ಕೆ ಕಾನೂನು ವಿವಿ ಹಾಗೂ ಭಾರತೀಯ ವಕೀಲ ಪರಿಷತ್ ನೇರ ಹೊಣೆ. ಇದರಿಂದಾಗಿ ಕಾನೂನು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಉಂಟಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಾಗಿದ್ದು, 101 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕಕ್ಕೆ ನಡೆಸಿದ ಪರೀಕ್ಷೆಯಲ್ಲಿ 4,770 ವಕೀಲರ ಪೈಕಿ ಕೇವಲ 33 ಮಂದಿ ಆಯ್ಕೆಯಾಗಿದ್ದು, ರಾಜ್ಯದ ಕಾನೂನು ಕಾಲೇಜುಗಳ ಶಿಕ್ಷಣದ ಗುಣಮಟ್ಟಕ್ಕೆ ನಿದರ್ಶನ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos