ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಮರು ಪರೀಕ್ಷೆಗೆ ಸಿಎಂ ಸೂಚನೆ

ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಮರು ಪರೀಕ್ಷೆಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ತಿಂಗಳು ಅಂದರೆ ಆಗಸ್ಟ್ 27ರಂದು ಕೆ ಎ ಎಸ್ ಹುದ್ದೆಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಕೆಲವು ಪ್ರಶ್ನೆಗಳು ಸಮರ್ಪಕವಾಗಿಲ್ಲ ಎಂಬ ವಿಚಾರಕ್ಕೆ ಸಂಭಂದಿಸಿದಂತೆ ವಿದ್ಯಾರ್ಥಿಗಳು ವ್ಯಾಪಕವಾಗಿ ವಿರೋಧ ವ್ಯಕ್ತಪಡಿಸಿದ್ದರು ಇದನ್ನರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಎರಡು ತಿಂಗಳ ಒಳಗಾಗಿ ಮತ್ತೆ ಕೆಎಎಸ್ ಗೆಜೆಟೆಡ್ ಪ್ರಮೋಷನಲ್ ಪರೀಕ್ಷೆಯನ್ನು ಮರು ಪರೀಕ್ಷೆ ಮಾಡಲು ಸೂಚಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ವಿತ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಎಸ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿ ಕಾಲುವೆಗಳ ಅಕ್ಕ-ಪಕ್ಕದಲ್ಲಿ ರಸ್ತೆ ನಿರ್ಮಾಣ: ಡಿಕೆಶಿ

ಕೆಎಎಸ್ ಪ್ರಶ್ನೆ ಪತ್ರಿಕೆ ಕನ್ನಡಕ್ಕೆ ಅನುವಾದ ಮಾಡುವಾಗ ಆಗಿರುವ ಎಡವಟ್ಟುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಗಳಲ್ಲಿನ ತಪ್ಪುಗಳನ್ನು ಉಲ್ಲೇಖಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಕೆಪಿಎಸ್ ಸಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos