ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಬೆಂಗಳೂರು, ಜ. 6 : ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ಒಂದು ತಿಂಗಳಿನಿಂದ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ನಿನ್ನೆ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು.
ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಲುವಾಗಿ ದೆಹಲಿಗೆ ಭೇಟಿ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಡಿಕೆಶಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ. ಆದರೆ, ಅದು ಅಂದುಕೊಂಡಷ್ಟು ಸುಲಭವಾಗಿಲ್ಲ.  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹಿಮ್ಮೆಟ್ಟಿಸುವುದು ಡಿಕೆಶಿಯ ಮೊದಲ ಸವಾಲು ಆಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಿದ್ದರಾಮಯ್ಯ ಅವರ ನಿವಾಸಕ್ಕೂ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ
ಮೊದಲಿನಿಂದಲೂ ಡಿಕೆಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಅಷ್ಟೇನೂ ಸಂಬಂಧ ಸರಿಯಾಗಿಲ್ಲ. 2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸುಮಾರು ಆರು ತಿಂಗಳ ಕಾಲ ಡಿಕೆಶಿಗೆ ಯಾವುದೇ ಸಚಿವ ಸ್ಥಾನ ನೀಡಿರಲಿಲ್ಲ. ಇತ್ತೀಚಿಗೆ ಡಿಕೆಶಿ ಇಡಿ ಬಂಧನ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲೂ ಸಿದ್ದರಾಮಯ್ಯ ಕಾಣಿಸಿಕೊಂಡಿರಲಿಲ್ಲ

ಫ್ರೆಶ್ ನ್ಯೂಸ್

Latest Posts

Featured Videos