ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ಪ್ರಕರಣ ಹೈಕೋರ್ಟ್ ಗೆ

ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ಪ್ರಕರಣ ಹೈಕೋರ್ಟ್ ಗೆ

ಬೆಂಗಳೂರು , ಮಾ.8, ನ್ಯೂಸ್ ಎಕ್ಸ್ ಪ್ರೆಸ್: ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಓಲಾ ಕಂಪನಿ ಬಳಿ ಹೋಗಿ ಯುವತಿ ಒಬ್ಬಳು ದೂರು ನೀಡಿದರೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.

ನ್ಯಾ. ಅಲೋಕ್ ಅಠಾರೆ ಅವರಿದ್ದ ಏಕಸದಸ್ಯಪೀಠ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಆಂತರಿಕ ದೂರು ಸಮಿತಿ ಮತ್ತು ಓಲಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರ ಯುವತಿ ತಾನು 2018ರ ಆಗಸ್ಟ್ನಲ್ಲಿ ಕಂಪನಿ ಕೆಲಸಕ್ಕೆ ಕ್ಯಾಬ್ ನಲ್ಲಿ ಹೋಗುತ್ತಿದ್ದಾಗ  ಚಾಲಕ ಯುವತಿಗೆ ಕಾಣುವಂತೆ ಅಶ್ಲೀಲ ದೃಶ್ಯಗಳನ್ನು ಮೊಬೈಲ್ನಲ್ಲಿ ವೀಕ್ಷಣೆ ಮಾಡುತ್ತಿದ್ದ.

ಅದರ ಜೊತೆಗೆ ಆತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ.

ಜೊತೆಗೆ ಕೆಟ್ಟದಾಗಿ ನಡೆದುಕೊಂಡಿದ್ದ ಈ ಬಗ್ಗೆ ಓಲಾ ಕಂಪನಿಗೆ ದೂರು ನೀಡಿದ ಬಳಿಕ ಆತನನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಹಾಗೆಯೇ ಕೌನ್ಸೆಲಿಂಗ್ ಮಾಡಿಸಲಾಗುವುದು ಎಂದು ಹೇಳಿತ್ತು. ಆದರೂ ಇಲ್ಲಿಯವರೆಗೆ ಆತನ ಮೇಲೆ ಯಾವ ವಿರುದ್ಧ ಕ್ರಮವನ್ನು ಕೈಗೊಂಡಿಲ್ಲ.

ಬಳಿಕ 2018ರ ಸೆಪ್ಟೆಂಬರ್ ತಿಂಗಳಲ್ಲಿ ಓಲಾ ಕಂಪನಿಗೆ ಲೀಗಲ್ ನೋಟಿಸ್ ನೀಡಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು. ಆದರೆ ಕಂಪನಿ ಆತನ ತಮ್ಮ ಕಂಪನಿಯ ಕಾಯಂ ಉದ್ಯೋಗಿ ಅಲ್ಲ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುದರಿಂದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದ ಕಾರಣ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.

ಫ್ರೆಶ್ ನ್ಯೂಸ್

Latest Posts

Featured Videos